ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಕಬಳಕೆ ಪ್ಲಾಸ್ಟಿಕ್‌ ನಿಷೇಧ: ಆದೇಶ ಉಲ್ಲಂಘಿಸಿದರೆ ಶಿಕ್ಷೆ

ಜುಲೈ 1ರಿಂದ ಕಟ್ಟುನಿಟ್ಟಾಗಿ ಜಾರಿ
Last Updated 1 ಜುಲೈ 2022, 11:44 IST
ಅಕ್ಷರ ಗಾತ್ರ

ನವದೆಹಲಿ: ‘ದೇಶದಲ್ಲಿ ಏಕಬಳಕೆ ಪ್ಲಾಸ್ಟಿಕ್‌ ನಿಷೇಧವು ಶುಕ್ರವಾರದಿಂದ (ಜುಲೈ 1) ಕಟ್ಟುನಿಟ್ಟಾಗಿ ಜಾರಿಗೆ ಬಂದಿದೆ. ಈ ಆದೇಶ ಮೀರಿ ಪ್ಲಾಸ್ಟಿಕ್‌ ಉತ್ಪಾದಿಸಿ ಅದನ್ನು ಸರಬರಾಜು ಮಾಡುವ ಮತ್ತು ದಾಸ್ತಾನು ಇಡುವುದು ಕಂಡುಬಂದರೆ ಅಂತಹ ಘಟಕಗಳನ್ನು ಮುಚ್ಚಲಾಗುತ್ತದೆ’ ಎಂದು ಕೇಂದ್ರ ಪರಿಸರ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆದರೆ ಈ ಆದೇಶ ದೇಶದ ವಿವಿಧೆಡೆ ಅಷ್ಟು ಪರಿಣಾಮಕಾರಿಯಾಗಿ ಜಾರಿಗೆ ಬಂದಿರುವುದು ಕಾಣಿಸಲಿಲ್ಲ. ಜನರು ಎಂದಿನಂತೆಯೇ ಪ್ಲಾಸ್ಟಿಕ್‌ ಚೀಲಗಳಲ್ಲಿ ಅಗತ್ಯದ ಸಾಮಗ್ರಿ ತುಂಬಿಸಿ ಸಾಗಿಸುತ್ತಿದ್ದುದು ಕಂಡುಬಂತು.

‘ನಿಷೇಧ ಆದೇಶವನ್ನು ಪರಿಣಾಮಕಾರಿಯಾಗಿ ಕಾರ್ಯಗತಗೊಳಿಸಲು ಕೇಂದ್ರ ಹಾಗೂ ರಾಜ್ಯಗಳ ಹಂತದಲ್ಲಿ ನಿಯಂತ್ರಣ ಕೊಠಡಿಗಳನ್ನು ಆರಂಭಿಸಲಾಗಿದೆ. ಅನಧಿಕೃತವಾಗಿ ಪ್ಲಾಸ್ಟಿಕ್‌ ಉತ್ಪಾದಿಸುವ, ಸರಬರಾಜು ಮಾಡುವ ಹಾಗೂ ದಾಸ್ತಾನು ಇರಿಸಿಕೊಂಡು ಮಾರಾಟ ಮಾಡುವವರನ್ನು ಪತ್ತೆಹಚ್ಚಲು ವಿಶೇಷ ತಂಡಗಳನ್ನು ರಚಿಸಲಾಗಿದೆ’ ಎಂದು ಅವರು ಹೇಳಿದ್ದಾರೆ.

‘ನಿಷೇಧಿಸಲ್ಪಟ್ಟ ಪ್ಲಾಸ್ಟಿಕ್‌ ಅನ್ನು ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಸಾಗಣೆ ಮಾಡುವುದನ್ನು ತಪ್ಪಿಸುವ ಸಲುವಾಗಿಗಡಿ ಭಾಗದಲ್ಲಿ ತಪಾಸಣಾ ಕೇಂದ್ರಗಳನ್ನು ಆರಂಭಿಸುವಂತೆ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಲಾಗಿದೆ. ಆದೇಶ ಉಲ್ಲಂಘಿಸುವವರಿಗೆ ದಂಡದ ಜೊತೆಗೆ ಜೈಲು ಶಿಕ್ಷೆ ವಿಧಿಸುವ ಅವಕಾಶ ಇದೆ. ಪರಿಸರ ಇಲಾಖೆಯು 2020ರಲ್ಲಿ ಆರಂಭಿಸಿದ್ದ ‘ಗ್ರೀನ್‌ ವಾರ್‌ ರೂಂ’ಗಳ ಮೂಲಕ ವಾಯು ಗುಣಮಟ್ಟ ಪರಿಶೀಲಿಸಲಿದೆ. ಜೊತೆಗೆ ಈ ಕುರಿತ ದೂರುಗಳನ್ನೂ ಸ್ವೀಕರಿಸಿ ಪರಿಹಾರ ಒದಗಿಸಲಿದೆ’ ಎಂದಿದ್ದಾರೆ.

ಭಾರತದಲ್ಲಿ ವಾರ್ಷಿಕ ಸುಮಾರು 2.4 ಲಕ್ಷ ಟನ್‌ ಏಕಬಳಕೆ ಪ್ಲಾಸ್ಟಿಕ್‌ ಉತ್ಪಾದಿಸಲಾಗುತ್ತದೆ ಎಂದುಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT