ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಭಯೋತ್ಪಾದನೆ ವಿರುದ್ಧ ಭಾರತ–ಬಾಂಗ್ಲಾ ಜಂಟಿ ಸಮರ ಸಾರಬೇಕು’

Last Updated 14 ಆಗಸ್ಟ್ 2022, 13:04 IST
ಅಕ್ಷರ ಗಾತ್ರ

ಕೋಲ್ಕತ್ತ (ಪಿಟಿಐ): ‘ಭಾರತ ಮತ್ತು ಬಾಂಗ್ಲಾದೇಶ ರಾಷ್ಟ್ರಗಳು ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ನಿಕಟ ಬಾಂಧವ್ಯ ವೃದ್ಧಿಯತ್ತ ಹೆಜ್ಜೆ ಇಡಬೇಕು. ಭಯೋತ್ಪಾದನೆ ವಿರುದ್ಧ ಜಂಟಿ ಸಮರ ಸಾರಬೇಕು’ ಎಂದು ನಿವೃತ್ತ ಐಪಿಎಸ್‌ ಅಧಿಕಾರಿ ಹಾಗೂ ಭದ್ರತಾ ವಿಶ್ಲೇಷಕ ಶಂತನು ಮುಖರ್ಜಿ ಅಭಿಪ್ರಾಯಪಟ್ಟಿದ್ದಾರೆ.

ಮಾರಿಷಸ್‌ನ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿರುವ ಶಂತನು, ‘ಧರ್ಮದ ನೆಲೆಯಲ್ಲಿ ಉಭಯ ರಾಷ್ಟ್ರಗಳ ನಡುವೆ ದ್ವೇಷ ಸೃಷ್ಟಿಸಲು ಬಾಹ್ಯ ಶಕ್ತಿಗಳು ಹವಣಿಸುತ್ತಿರುತ್ತವೆ. ಅಂತಹ ಶಕ್ತಿಗಳಿಂದ ಭಾರತವು ದೂರ ಇರಬೇಕು. ಜೊತೆಗೆ ಅಂತರವನ್ನೂ ಕಾಯ್ದುಕೊಳ್ಳಬೇಕು’ ಎಂದು ಸಲಹೆ ನೀಡಿದ್ದಾರೆ.

‘ಉಭಯ ರಾಷ್ಟ್ರಗಳ ನಾಗರಿಕರ ನಡುವೆ ಹಗೆತನದ ಭಾವನೆ ಸೃಷ್ಟಿಸಲು ಬಾಹ್ಯಶಕ್ತಿಗಳು ಸಾಮಾಜಿಕ ಜಾಲತಾಣಗಳನ್ನು ಅಸ್ತ್ರವಾಗಿ ಬಳಸುವ ಸಾಧ್ಯತೆ ಇದೆ. ಈ ಬಗ್ಗೆಯೂ ಎಚ್ಚರಿಕೆಯಿಂದ ಇರಬೇಕು’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT