ಶನಿವಾರ, ಮೇ 15, 2021
23 °C
95 ದಿನಗಳಲ್ಲಿ 13 ಕೋಟಿ ಡೋಸ್‌ಗಳಷ್ಟು ಲಸಿಕೆ ನೀಡಿದ ಭಾರತ

ಕೋವಿಡ್‌ ಲಸಿಕೆ ನೀಡಿಕೆ: ಚೀನಾ, ಅಮೆರಿಕ ಹಿಂದಿಕ್ಕಿದ ಭಾರತ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ‘95 ದಿನಗಳಲ್ಲಿ 13 ಕೋಟಿ ಡೋಸ್‌ಗಳಷ್ಟು ಕೋವಿಡ್‌ ಲಸಿಕೆ ನೀಡುವ ಮೂಲಕ, ಭಾರತ ವಿಶ್ವದಲ್ಲೇ ವೇಗವಾಗಿ ಲಸಿಕೆಗಳನ್ನು ನೀಡಿದ ದೇಶ ಎಂಬ ಹೆಗ್ಗಳಿಕೆಗೆ ಪ‍ಡೆದಿದೆ’ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ.

ಇಷ್ಟೇ ಪ್ರಮಾಣದ ಲಸಿಕೆಯ ಡೋಸ್‌ಗಳನ್ನು ನೀಡಲು ಅಮೆರಿಕ 101 ದಿನ ತೆಗೆದುಕೊಂಡಿದ್ದರೆ, ಚೀನಾ 109 ದಿನಗಳನ್ನು ತೆಗೆದುಕೊಂಡಿದೆ. ಈ ರಾಷ್ಟ್ರಗಳಿಗೆ ಹೋಲಿಸಿದರೆ ಭಾರತ ಅತ್ಯಂತ ತ್ವರಿತಗತಿಯಲ್ಲಿ ಲಸಿಕೆ ನೀಡುವ ರಾಷ್ಟ್ರವಾಗಿ ಹೊರ ಹೊಮ್ಮಿದೆ‘ ಎಂದು ಸಚಿವಾಲಯದ ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

‘ದೇಶದಲ್ಲಿ ಈವರೆಗೆ 13,01,19,310 ಡೋಸ್‌ ಲಸಿಕೆ ನೀಡಲಾಗಿದ್ದು, ಪ್ರತಿ ನಿತ್ಯ (24 ಗಂಟೆಗಳಲ್ಲಿ) 29,90,197 ಡೋಸ್‌ಗಳಷ್ಟು ಲಸಿಕೆ ನೀಡಲಾಗುತ್ತಿದೆ’ ಎಂದು ಸಚಿವಾಲಯದ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ದೇಶದಲ್ಲಿ ಈವರೆಗೆ ನೀಡಿರುವ ಕೋವಿಡ್‌ ಲಸಿಕೆಯ ಪ್ರಮಾಣದಲ್ಲಿ ಶೇ 59.3ರಷ್ಟು ಪಾಲನ್ನು ಮಹಾರಾಷ್ಟ್ರ, ರಾಜಸ್ಥಾನ, ಉತ್ತರಪ್ರದೇಶ, ಗುಜರಾತ್‌, ಪಶ್ಚಿಮ ಬಂಗಾಳ,ಕರ್ನಾಟಕ, ಮಧ್ಯಪ್ರದೇಶ ಮತ್ತು ಕೇರಳ ರಾಜ್ಯಗಳು ಪಡೆದುಕೊಂಡಿವೆ.

ಜನವರಿ 16ರಂದು ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡುವ ಮೂಲಕ ಮೊದಲ ಬಾರಿಗೆ  ಬೃಹತ್ ಕೋವಿಡ್‌ ಲಸಿಕಾ ಅಭಿಯಾನ ಆರಂಭಿಸಲಾಯಿತು. ಫೆಬ್ರುವರಿ 2 ರಿಂದ ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ನೀಡಲಾಯಿತು.

ನಂತರ ಮುಂದಿನ ಹಂತವಾಗಿ ಮಾರ್ಚ್‌ 1 ರಿಂದ 60 ವರ್ಷ ಮೇಲ್ಪಟ್ಟ ಮತ್ತು ಏಪ್ರಿಲ್ 1 ರಿಂದ 45 ವರ್ಷ ಮೇಲ್ಪಟ್ಟ ನಾಗರಿಕರಿಗೆ ಲಸಿಕೆಗಳನ್ನು ನೀಡಲು ಆರಂಭಿಸಲಾಯಿತು. ಈಗ ಲಸಿಕೆ ಅಭಿಯಾನವನ್ನು ವಿಸ್ತರಿಸಲಾಗಿದ್ದು, ಮೇ 1 ರಿಂದ 18 ವರ್ಷ ಮೇಲ್ಪಟ್ಟವರಿಗೂ ಲಸಿಕೆಯನ್ನು ನೀಡಲು ಸರ್ಕಾರ ನಿರ್ಧರಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು