ನವದೆಹಲಿ: ಕೋವಿಡ್ ಲಸಿಕೆಯನ್ನು ವಿವಿಧ ರಾಷ್ಟ್ರಗಳಿಗೆ ಕೋಟಿ ಸಂಖ್ಯೆಯಲ್ಲಿ ರಫ್ತು ಮಾಡುತ್ತಿದ್ದ ಭಾರತ, ಈಗ ರಷ್ಯಾದ ಸ್ಪುಟ್ನಿಕ್ ಲಸಿಕೆ ಆಮದು ಮಾಡಿಕೊಳ್ಳಲು ಸಜ್ಜಾಗಿದೆ.

ಜಗತ್ತಿನ ಎರಡನೇ ಅತಿ ಹೆಚ್ಚಿನ ಜನಸಂಖ್ಯೆ ಹೊಂದಿರುವ ರಾಷ್ಟ್ರ ಭಾರತದಲ್ಲಿ ಗುರುವಾರ 2 ಲಕ್ಷಕ್ಕೂ ಅಧಿಕ ಕೋವಿಡ್ ಸೋಂಕು ಪ್ರಕರಣ ಕಾಣಿಸಿಕೊಂಡಿದ್ದು, ದೇಶಿಯ ಲಸಿಕೆ ಉತ್ಪಾದನೆ ಸಾಲದೇ ಈಗ ಹೊರಗಿನಿಂದ ಆಮದು ಮಾಡಿಕೊಳ್ಳಬೇಕಾದ ಪರಿಸ್ಥಿತಿ ಉದ್ಭವಿಸಿದೆ.

ಈ ತಿಂಗಳಿನಲ್ಲಿ ಭಾರತ, ರಷ್ಯಾದಿಂದ ಸ್ಪುಟ್ನಿಕ್ ವಿ ಲಸಿಕೆಯನ್ನು ತರಿಸಿಕೊಂಡು, 12.5 ಕೋಟಿ ಜನರಿಗೆ ವಿತರಿಸಲಿದೆ. ವಿವಿಧ ರಾಷ್ಟ್ರಗಳಿಗೆ ಲಸಿಕೆ ನೀಡಿ, ಸುದ್ದಿಯಾಗಿದ್ದ ದೇಶಕ್ಕೆ ಈಗ ರಷ್ಯಾದಿಂದ ಲಸಿಕೆ ಆಮದು ಮಾಡಿಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿದೆ.

ಈಗಾಗಲೇ ವಿವಿಧ ರಾಜ್ಯಗಳಲ್ಲಿ ನಿರ್ಬಂಧ ಹೇರಲಾಗಿದ್ದು, ಕರ್ಫ್ಯೂ ಮುಂತಾದ ಕ್ರಮ ಜಾರಿಯಲ್ಲಿದೆ. ಅಲ್ಲದೆ, ಕೋವಿಡ್ ಪ್ರಕರಣಗಳ ಹೆಚ್ಚಳದಿಂದ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳನ್ನು ದಾಖಲು ಮಾಡಿಕೊಳ್ಳಲು ಕೂಡ ಸಮಸ್ಯೆಯಾಗಿದೆ.

ರೆಮ್ಡಿಸಿವಿರ್: ದುಪ್ಪಟ್ಟು ದರಕ್ಕೆ ಮಾರಾಟ, ಬೆಂಗಳೂರಿನ ಖಾಸಗಿ ಆಸ್ಪತ್ರೆಗಳ ಆರೋಪ

ಭಾರತ, ಆಫ್ರಿಕಾ ಸಹಿತ 60 ವಿವಿಧ ರಾಷ್ಟ್ರಗಳಿಗೆ ಕೋವಿಡ್ ಲಸಿಕೆಯನ್ನು ನೀಡಿತ್ತು. ಏಪ್ರಿಲ್ ತಿಂಗಳಿನಲ್ಲಿ ಈವರೆಗೆ ಒಟ್ಟು 12 ಲಕ್ಷ ಡೋಸ್ ಲಸಿಕೆಯನ್ನು ರಫ್ತು ಮಾಡಲಾಗಿದೆ. ಜನವರಿಯಿಂದ ಮಾರ್ಚ್ವರೆಗೆ ಒಟ್ಟು 6.4 ಕೋಟಿ ಡೋಸ್ ಲಸಿಕೆಯನ್ನು ಭಾರತ ರಫ್ತು ಮಾಡಿತ್ತು ಎಂದು ವಿದೇಶಾಂಗ ಸಚಿವಾಲಯದ ಮಾಹಿತಿ ಹೇಳಿದೆ.

ಕೋವಿಡ್: ಹತ್ತು ರಾಜ್ಯಗಳಲ್ಲಿ ಗರಿಷ್ಠ ಪ್ರಕರಣಗಳು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.