ಭುವನೇಶ್ವರ: ಒಡಿಶಾ ಕರಾವಳಿ ಬಳಿಯ ಎ.ಪಿ.ಜೆ.ಅಬ್ದುಲ್ ಕಲಾಂ ದ್ವೀಪದಿಂದ ಬುಧವಾರ ಮಧ್ಯಂತರ ವ್ಯಾಪ್ತಿಯ ಬ್ಯಾಲಿಸ್ಟಿಕ್ ಕ್ಷಿಪಣಿ ‘ಅಗ್ನಿ–3’ರ ಉಡಾವಣೆ ಯಶಸ್ವಿಯಾಯಿತು ಎಂದು ಡಿಆರ್‌ಡಿಒ ಮೂಲಗಳು ಹೇಳಿವೆ.
ತರಬೇತಿ ಉದ್ದೇಶದಿಂದ ಈ ಕ್ಷಿಪಣಿ ಉಡಾವಣೆ ಪರೀಕ್ಷೆಯನ್ನು ನೆರವೇರಿಸಲಾಯಿತು. ಪೂರ್ವ ನಿರ್ಧರಿತ ಗುರಿಯನ್ನು ಧ್ವಂಸಗೊಳಿಸುವ ಮೂಲಕ ಕ್ಷಿಪಣಿ ವ್ಯವಸ್ಥೆಯ ಕಾರ್ಯಾಚರಣೆಗೆ ಸಂಬಂಧಿಸಿದ ಎಲ್ಲ ಅಂಶಗಳು ಕ್ರಮಬದ್ಧವಾಗಿವೆ ಎಂಬುದನ್ನು ಈ ಪರೀಕ್ಷೆ ಸಾಬೀತುಪಡಿಸಿತು ಎಂದು ಮೂಲಗಳು ಹೇಳಿವೆ.