ಶುಕ್ರವಾರ, ಮೇ 7, 2021
26 °C

ಸಂಘರ್ಷ ಪ್ರದೇಶಗಳಿಂದ ಸೇನೆ ವಾಪಸ್‌: ಪ್ರಗತಿ ಸಾಧಿಸದ ಭಾರತ– ಚೀನಾ ಮಾತುಕತೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಪೂರ್ವ ಲಡಾಖ್‌ನ ಸಂಘರ್ಷ ಪ್ರದೇಶಗಳಲ್ಲಿ ಬಾಕಿ ಉಳಿದಿರುವ ಸೇನೆಯನ್ನು ವಾಪಸ್‌ ಕರೆಯಿಸಿಕೊಳ್ಳುವ ವಿಷಯಕ್ಕೆ ಸಂಬಂಧಿಸಿದಂತೆ ಭಾರತ ಮತ್ತು ಚೀನಾ ನಡುವಣ ಮಾತುಕತೆಯಲ್ಲಿ ಹೆಚ್ಚಿನ ಪ್ರಗತಿ ಸಾಧಿಸಿಲ್ಲ.

ಶನಿವಾರ ಚುಷುಲ್‌ ಗಡಿಯಲ್ಲಿ ಭಾರತ ಮತ್ತು ಚೀನಾ ಸೇನೆಯ ಕಮಾಂಡರ್‌ ಮಟ್ಟದ 11ನೇ ಸುತ್ತಿನ ಮಾತುಕತೆ ನಡೆಯಿತು.

ಡೆಪ್‌ಸ್ಯಾಂಗ್‌, ಗೋಗ್ರಾ ಮತ್ತು ಹಾಟ್‌ಸ್ಟ್ರಿಂಗ್ಸ್‌ ಪ್ರದೇಶದಿಂದ ಸೇನೆಯನ್ನು ವಾಪಸ್‌ ಕರೆಸಿಕೊಳ್ಳುವ ಬಗ್ಗೆ ಚರ್ಚಿಸಲಾಯಿತು. ಆದರೆ, ಚೀನಾ ತನ್ನ ನಿಲುವು ಸಡಿಲಿಸಲಿಲ್ಲ ಎಂದು ಮೂಲಗಳು ತಿಳಿಸಿವೆ.

ಮಾತುಕತೆ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಭಾರತೀಯ ಸೇನೆ, ‘ಬಾಕಿ ಉಳಿದಿರುವ ಪ್ರದೇಶಗಳಲ್ಲಿನ ಸೇನೆಯನ್ನು ವಾಪಸ್‌ ಕರೆಯಿಸಿಕೊಳ್ಳುವ ಬಗ್ಗೆ ಚರ್ಚಿಸಲಾಯಿತು. ಯಾವುದೇ ರೀತಿಯ ಘಟನೆಗಳು ನಡೆಯದಂತೆ ಸ್ಥಿರತೆಯನ್ನು ಕಾಪಾಡಲು ಉಭಯ ದೇಶಗಳು ಒಪ್ಪಿಕೊಂಡಿವೆ. ಜತೆಗೆ, ಬಾಕಿ ಉಳಿದಿರುವ ಬಿಕ್ಕಟುಗಳ ಬಗ್ಗೆ ಶೀಘ್ರ ಇತ್ಯರ್ಥಗೊಳಿಸಲು ಒಪ್ಪಿವೆ’ ಎಂದು ತಿಳಿಸಿದೆ.

ಮಾತುಕತೆಗೆ ಚೀನಾ ಮಿಲಿಟರಿ ಹಿರಿಯ ಅಧಿಕಾರಿಗಳು ಪೂರ್ವ ನಿರ್ಧಾರ ಕೈಗೊಂಡು ಬಂದಿದ್ದರು. ತಮ್ಮ ನಿಲುವುಗಳಲ್ಲಿ ಸಡಿಲಿಕೆ ತೋರಲಿಲ್ಲ ಎಂದು ಮೂಲಗಳು ತಿಳಿಸಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು