ಸೋಮವಾರ, ಏಪ್ರಿಲ್ 12, 2021
32 °C

ಚೀನಾ–ಭಾರತ ಸೇನಾ ಕಮಾಂಡರ್‌ಗಳ ಮಾತುಕತೆ ಸಾಧ್ಯತೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಭಾರತ ಮತ್ತು ಚೀನಾ ನಡುವಿನ ಸೇನಾ ಕಮಾಂಡರ್‌ಗಳ ಮಟ್ಟದ ಮುಂದಿನ ಮಾತುಕತೆ ಶುಕ್ರವಾರ ನಡೆಯುವ ನಿರೀಕ್ಷೆಯಿದೆ.

ಪೂರ್ವ ಲಡಾಕ್‌ನ ಘರ್ಷಣೆ ನಡೆದ ಸ್ಥಳದಿಂದ ಯೋಧರನ್ನು ಹಿಂದಕ್ಕೆ ಕರೆಸಿಕೊಳ್ಳುವ ಪ್ರಕ್ರಿಯೆಯ ರೂಪುರೇಷೆ ಅಂತಿಮಗೊಳಿಸುವ ಕುರಿತಂತೆ ಈ ಮಾತುಕತೆಯಲ್ಲಿ ಗಮನಹರಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಗೋಗ್ರಾ ಮತ್ತು ಹಾಟ್‌ಸ್ಟ್ರಿಂಗ್ಸ್‌ ಪ್ರದೇಶದಲ್ಲಿರುವ ಸೇನೆಯನ್ನು ವಾಪಸ್‌ ಕರೆಸಿಕೊಳ್ಳುವ ಜೊತೆಗೆ ಡೆಪ್ಸಾಂಗ್ ಬಯಲು ಪ್ರದೇಶಗಳಲ್ಲಿನ ಸಮಸ್ಯೆಗಳನ್ನು ಶೀಘ್ರ ಪರಿಹರಿಸುವಂತೆ ಭಾರತ ಚೀನಾದ ಮೇಲೆ ಒತ್ತಡ ಹೇರಲಿದೆ ಎನ್ನಲಾಗಿದೆ.

ಶುಕ್ರವಾರ ಹನ್ನೊಂದನೇ ಸುತ್ತಿನ ಮಿಲಿಟರಿ ಮಾತುಕತೆ ನಡೆಸುವ ಬಗ್ಗೆ ಎರಡು ಕಡೆಯಿಂದ ಮಾಹಿತಿ ವಿನಿಮಯ ಆಗಿದೆ ಎಂದು ಮೂಲಗಳು ಹೇಳಿವೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು