ಗುರುವಾರ , ಜೂನ್ 24, 2021
23 °C

ದೇಶದಲ್ಲಿ 20.55 ಲಕ್ಷ ಕೋವಿಡ್‌ ಪರೀಕ್ಷೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಇಪ್ಪತ್ತನಾಲ್ಕು ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 20.55 ಲಕ್ಷ ಕೋವಿಡ್‌ ಪರೀಕ್ಷೆಗಳನ್ನು ಮಾಡಲಾಗಿದ್ದು ದಿನವೊಂದರಲ್ಲಿ ನಡೆಸಿದ ಅತಿ ಹೆಚ್ಚಿನ ಪರೀಕ್ಷೆ ಆಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಹೇಳಿದೆ.

ಇದೇ ಅವಧಿಯಲ್ಲಿ ಪಾಸಿಟಿವಿಟಿ ದರ ಶೇಕಡಾ 13.44ರಷ್ಟಿದೆ. ಬುಧವಾರ ಒಟ್ಟು 20,55,010 ಪರೀಕ್ಷೆಗಳನ್ನು ಮಾಡಲಾಗಿದೆ.

ಗುಣಮುಖರಾಗುವವರ ಸಂಖ್ಯೆಯು ಸತತ  7ನೇ ದಿನವೂ ಸೋಂಕಿತರ ಸಂಖ್ಯೆಗಿಂತ ಹೆಚ್ಚಾಗಿದೆ. 24 ಗಂಟೆಗಳಲ್ಲಿ 3,69,077 ಮಂದಿ ಗುಣಮುಖರಾಗಿದ್ದರೆ, 2,76,110 ಮಂದಿ ಸೋಂಕಿತರಾಗಿದ್ದಾರೆ ಎಂದು ಸಚಿವಾಲಯ ವಿವರಿಸಿದೆ.

ಒಟ್ಟು ಪ್ರಕರಣಗಳಲ್ಲಿ ಶೇಕಡಾ 77.17ರಷ್ಟು ಪ್ರಕರಣಗಳು ತಮಿಳುನಾಡು, ಕರ್ನಾಟಕ, ಮಹಾರಾಷ್ಟ್ರ, ಕೇರಳ, ಆಂಧ್ರಪ್ರದೇಶ, ಪಶ್ಚಿಮಬಂಗಾಳ, ಒಡಿಶಾ, ರಾಜಸ್ಥಾನ, ಉತ್ತರಪ್ರದೇಶ ಮತ್ತು ಹರಿಯಾಣದಿಂದ ವರದಿಯಾಗಿವೆ ಎಂದು ಸಚಿವಾಲಯ ತಿಳಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು