ಸೋಮವಾರ, ಅಕ್ಟೋಬರ್ 26, 2020
23 °C
ಕೇಂದ್ರ ಸರ್ಕಾರದಿಂದ ಜಾಗೃತಿ ಅಭಿಯಾನಕ್ಕೆ ಚಾಲನೆ

ಕೋವಿಡ್‌ ವಿರುದ್ಧ ಭಾರತದಲ್ಲಿ ಜನಾಂದೋಲನ: ನರೇಂದ್ರ ಮೋದಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ‘ದೇಶದಲ್ಲಿ ಕೋವಿಡ್‌–19 ವಿರುದ್ಧದ ಹೋರಾಟದ ಭಾಗವಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ‘ಜನ ಆಂದೋಲನ್’ ಅಭಿಯಾನಕ್ಕೆ ಕೇಂದ್ರ ಸರ್ಕಾರ ಗುರುವಾರ ಚಾಲನೆ ನೀಡಿದೆ. 

ಆರ್ಥಿಕ ಚಟುವಟಿಕೆಗಳು ಮತ್ತೆ ಗರಿಗೆದರಿವೆ. ಸಾಲು ಸಾಲು ಹಬ್ಬಗಳೂ ಮುಂದಿನ ದಿನಗಳಲ್ಲಿವೆ. ಈ ಕಾರಣದಿಂದ ಜನದಟ್ಟಣೆ ಹೆಚ್ಚಾಗಲಿದ್ದು, ಸಣ್ಣ ಅಜಾಗೃತೆಯಿಂದ ಸೋಂಕು ಮತ್ತಷ್ಟು ವ್ಯಾಪಿಸಬಹುದಾದ ಕಾರಣ ಈ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ ಎಂದು ಹೇಳಿದೆ. 

‘ಭಾರತದಲ್ಲಿ ಕೋವಿಡ್‌–19 ವಿರುದ್ಧದ ಹೋರಾಟವು ಜನಾಂದೋಲನವಾಗಿದೆ. ಇದಕ್ಕೆ ಕೋವಿಡ್‌ ಯೋಧರು ಮತ್ತಷ್ಟು ಬಲ ತುಂಬಿದ್ದಾರೆ. ಸೋಂಕಿನ ವಿರುದ್ಧ ಹೋರಾಡಲು ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದ್ದಾರೆ.

‘Unite2FightCorona’ ಎನ್ನುವ ಹ್ಯಾಶ್‌ಟ್ಯಾಗ್‌ ಬಳಸಿ ಟ್ವೀಟ್‌ ಮಾಡಿರುವ ಮೋದಿ, ‘ಮುಖಗವಸು ಧರಿಸಿ, ಕೈಗಳನ್ನು ಆಗಾಗೆ ತೊಳೆಯಿರಿ, ಪರಸ್ಪರ ಅಂತರ ಕಾಪಾಡಿಕೊಳ್ಳಿ. ಒಟ್ಟಾಗಿ ನಾವು ಈ ಸೋಂಕಿನ ವಿರುದ್ಧ ಹೋರಾಡಿ ಜಯಿಸೋಣ’ ಎಂದು ಉಲ್ಲೇಖಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು