ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

India Covid-19 Update: ದೈನಂದಿನ ಕೋವಿಡ್ ಪ್ರಕರಣಗಳಲ್ಲಿ ತುಸು ಇಳಿಕೆ

Last Updated 18 ಜನವರಿ 2022, 5:36 IST
ಅಕ್ಷರ ಗಾತ್ರ

ನವದೆಹಲಿ: ದೇಶದಾದ್ಯಂತ 24 ಗಂಟೆ ಅವಧಿಯಲ್ಲಿ 2,38,018 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ದೈನಂದಿನ ಪ್ರಕರಣಗಳ ಸಂಖ್ಯೆಯಲ್ಲಿ ತುಸು ಇಳಿಕೆ ಕಂಡುಬಂದಿದೆ. ಸೋಮವಾರ 2,58,089 ಪ್ರಕರಣಗಳು ದೃಢಪಟ್ಟಿದ್ದವು.

310 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಸದ್ಯ ದೇಶದಲ್ಲಿ 17,36,628 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 8,891 ಓಮೈಕ್ರಾನ್‌ ಪ್ರಕರಣಗಳು ದೃಢಪಟ್ಟಿವೆ.

ದೇಶದಾದ್ಯಂತ 158.04 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಲಾಗಿದ್ದು, 24 ಗಂಟೆ ಅವಧಿಯಲ್ಲಿ 80 ಲಕ್ಷ ಡೋಸ್ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT