ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

India Covid Update: 618 ಕೋವಿಡ್ ಹೊಸ ಪ್ರಕರಣಗಳು ದೃಢ, ಐವರು ಸಾವು

Last Updated 15 ಮಾರ್ಚ್ 2023, 7:09 IST
ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿ 117 ದಿನಗಳ ಬಳಿಕ ಒಂದೇ ದಿನ ಕೋವಿಡ್–19 ದೃಢಪಟ್ಟ 618 ಹೊಸ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ಹೇಳಿದೆ.

ಕಳೆದ 24 ಗಂಟೆಗಳಲ್ಲಿ 618 ಹೊಸ ಪ್ರಕರಣಗಳು ವರದಿಯಾಗಿದ್ದು ದೇಶದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚಳವಾಗುತ್ತಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 4,197ಕ್ಕೆ ಏರಿಕೆಯಾಗಿದ್ದು, ಐವರು ಮೃತಪಟ್ಟಿದ್ದಾರೆ. ಕರ್ನಾಟಕ, ಮಹಾರಾಷ್ಟ್ರದಲ್ಲಿ ತಲಾ ಇಬ್ಬರು, ಉತ್ತರಾಖಂಡ್‌ನಲ್ಲಿ ಒಬ್ಬರು ಮೃತಪಟ್ಟಿದ್ದಾರೆ.

ದೇಶದಲ್ಲಿ ಇದುವರೆಗೆ ಪತ್ತೆಯಾಗಿರುವ ಪ್ರಕರಣಗಳ ಸಂಖ್ಯೆ 4,46,91,956ಕ್ಕೆ ತಲುಪಿದೆ. ಇಲ್ಲಿಯವರೆಗೂ ಕೋವಿಡ್‌ನಿಂದ ಮೃತಪಟ್ಟಿರುವವರ ಸಂಖ್ಯೆ 5,30,789ಕ್ಕೆ ಏರಿಕೆಯಾಗಿದೆ.

ಒಟ್ಟಾರೆ ಪ್ರಕರಣಗಳಿಗೆ ಹೋಲಿಸಿದರೆ, ಸಕ್ರಿಯ ಪ್ರಕರಣಗಳ ಪ್ರಮಾಣ ಶೇ 0.01 ರಷ್ಟಿದೆ. ಗುಣಮುಖರಾದವರ ಪ್ರಮಾಣ ಶೇ 98.80 ರಷ್ಟು ಇದೆ ಎಂದು ಸಚಿವಾಲಯ ಹೇಳಿದೆ.

ಇಲಾಖೆಯ ಮಾಹಿತಿ ಪ್ರಕಾರ ಇದುವರೆಗೆ 220.64 ಕೋಟಿ ಡೋಸ್‌ ಕೋವಿಡ್ ಲಸಿಕೆ ವಿತರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT