ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

India Covid Update: ಸಕ್ರಿಯ ಪ್ರಕರಣ 30 ಸಾವಿರಕ್ಕಿಂತಲೂ ಇಳಿಕೆ

Last Updated 8 ಅಕ್ಟೋಬರ್ 2022, 5:26 IST
ಅಕ್ಷರ ಗಾತ್ರ

ನವದೆಹಲಿ: ದೇಶದಾದ್ಯಂತ ಶನಿವಾರಬೆಳಿಗ್ಗೆ ಕೊನೆಗೊಂಡ 24 ಗಂಟೆಗಳಲ್ಲಿ ಹೊಸದಾಗಿ 2,797 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 24 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಸಕ್ರಿಯ ಪ್ರಕರಣ 122 ದಿನಗಳ ಬಳಿಕ 30 ಸಾವಿರಕ್ಕಿಂತಲೂ ಕೆಳಗಿಳಿದಿದ್ದು, 29,251ಕ್ಕೆ ತಲುಪಿದೆ.

ಕಳೆದೊಂದು ದಿನದಲ್ಲಿ 3,884 ಮಂದಿ ಚೇತರಿಸಿಕೊಂಡಿದ್ದು, ಈವರೆಗೆ ಒಟ್ಟು 4,40,51,228 ಮಂದಿ ಗುಣಮುಖರಾಗಿದ್ದಾರೆ.

ದೇಶದಲ್ಲಿ ಇದುವರೆಗೆ 4,46,09,257 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಒಟ್ಟು 5,28,778 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

ಕೋವಿಡ್ ದೈನಂದಿನ ದೃಢ ಪ್ರಮಾಣ ಶೇ 1.05 ಮತ್ತು ವಾರದ ದೃಢ ಪ್ರಮಾಣ ಶೇ 1.30 ಆಗಿದೆ.

ಒಟ್ಟು ಸೋಂಕಿತರ ಪೈಕಿ ಶೇ 0.07 ಸಕ್ರಿಯ ಪ್ರಕರಣಗಳಿವೆ. ಹಾಗೆಯೇ ರಾಷ್ಟ್ರೀಯ ಕೋವಿಡ್ ಚೇತರಿಕೆ ಪ್ರಮಾಣ ಶೇ 98.75 ಆಗಿದೆ.

ದೇಶದಲ್ಲಿ ಈವರೆಗೆ 89.67 ಕೋಟಿ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, 218.93 ಕೋಟಿ ಕೋವಿಡ್ ಲಸಿಕೆ ಡೋಸ್ ವಿತರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT