Covid-19 India Update: ದೇಶದಲ್ಲಿ 8.06 ಲಕ್ಷ ಜನರಿಗೆ ಕೋವಿಡ್ ಲಸಿಕೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್–19 ದೃಢಪಟ್ಟ 15,223 ಪ್ರಕರಣಗಳು ದಾಖಲಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 1,06,10,883 ಮುಟ್ಟಿದೆ.
ಇದೇ ಅವಧಿಯಲ್ಲಿ 19,965 ಮಂದಿ ಗುಣಮುಖರಾಗಿದ್ದು, ಸೋಂಕಿನಿಂದ 151 ಜನ ಸಾವಿಗೀಡಾಗಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಪ್ರಕಟಿಸಿದೆ.
ಒಟ್ಟು ಪ್ರಕರಣಗಳ ಪೈಕಿ 1,02,65,706 ಮಂದಿ ಗುಣಮುಖರಾಗಿದ್ದಾರೆ ಹಾಗೂ 1,52,869 ಮಂದಿ ಮೃತಪಟ್ಟಿದ್ದಾರೆ. ಪ್ರಸ್ತುತ 1,92,308 ಪ್ರಕರಣಗಳು ಸಕ್ರಿಯವಾಗಿವೆ. ದೇಶದಲ್ಲಿ ಈವರೆಗೂ 8,06,484 ಜನರಿಗೆ ಕೋವಿಡ್ ಲಸಿಕೆ ಹಾಕಲಾಗಿದೆ.
ಕೇರಳದಲ್ಲಿ 69,914 ಪ್ರಕರಣಗಳು, ಮಹಾರಾಷ್ಟ್ರದಲ್ಲಿ 47,982, ಉತ್ತರ ಪ್ರದೇಶದಲ್ಲಿ 7,873, ಕರ್ನಾಟಕದಲ್ಲಿ 7,716 ಹಾಗೂ ಪಶ್ಚಿಮ ಬಂಗಾಳದಲ್ಲಿ 6,675 ಪ್ರಕರಣಗಳು ಸಕ್ರಿಯವಾಗಿವೆ.
✅India's #COVID19 recovery rate improves to 96.75% as on January 21, 2021#IndiaFightsCorona#Unite2FightCorona
Via @MoHFW_INDIA pic.twitter.com/7vEM6D8zIn
— #IndiaFightsCorona (@COVIDNewsByMIB) January 21, 2021
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.