ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದಲ್ಲಿ ಕೋವಿಡ್‌ ಪ್ರಕರಣ ಹೆಚ್ಚಳ: ಸೋನಿಯಾ ಗಾಂಧಿಗೆ ಕೊರೊನಾ ಸೋಂಕು ದೃಢ

ಅಕ್ಷರ ಗಾತ್ರ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕೊರೊನಾ ಸೋಂಕು ತಗುಲಿರುವುದ ದೃಢಪಟ್ಟಿದೆ ಎಂದು ಪಕ್ಷದ ನಾಯಕ ರಣದೀಪ್ ಸುರ್ಜೆವಾಲಾ ಗುರುವಾರ ಹೇಳಿದ್ದಾರೆ.

ಸೋನಿಯಾ ಅವರಿಗೆ ಜ್ವರ ಸೇರಿದಂತೆ ಕೆಲವು ಸೌಮ್ಯ ಲಕ್ಷಣಗಳು ಕಾಣಿಸಿಕೊಂಡಿವೆ. ಸದ್ಯ ಅವರು ಮನೆಯಲ್ಲೇ ಪ್ರತೇಕವಾಸದಲ್ಲಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸುರ್ಜೆವಾಲಾ ಮಾಹಿತಿ ನೀಡಿದ್ದಾರೆ.

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಸಂಸದ ರಾಹುಲ್‌ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯವು (ಇ.ಡಿ) ಬುಧವಾರ ಸಮನ್ಸ್‌ ಜಾರಿ ಮಾಡಿತ್ತು.

ಜೂನ್‌ 8ರಂದು ಸೋನಿಯಾ ಗಾಂಧಿ ಅವರು ಇ.ಡಿ. ಕಚೇರಿಗೆ ಹೋಗುವುದಾಗಿ ತಿಳಿಸಿದ್ದರು.

ಕೇರಳ, ಮಹಾರಾಷ್ಟ್ರದಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಗಣನೀಯ ಏರಿಕೆ
ನವದೆಹಲಿ:
ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 3,712 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 5 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 4,31,64,544ಕ್ಕೆ ಏರಿಕೆಯಾಗಿದೆ. ಆ ಪೈಕಿ 5,24,641 ಮಂದಿ ಸಾವಿಗೀಡಾಗಿದ್ದಾರೆ.

ಇದುವರೆಗೆ 4,26,20,394 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 19,509 ಸಕ್ರಿಯ ಪ್ರಕರಣಗಳಿದ್ದು, ದೈನಂದಿನ ಪಾಸಿಟಿವಿಟಿ ದರ ಶೇ 0.67ರಷ್ಟಿದೆ.

ಕೇರಳದಲ್ಲಿ 6,256, ಮಹಾರಾಷ್ಟ್ರದಲ್ಲಿ 4,032, ಕರ್ನಾಟಕದಲ್ಲಿ 2,001, ದೆಹಲಿಯಲ್ಲಿ 1,567, ಹರಿಯಾಣದಲ್ಲಿ 856, ಉತ್ತರ ಪ್ರದೇಶದಲ್ಲಿ 850 ಸಕ್ರಿಯ ಪ್ರಕರಣಗಳಿವೆ.

ದೇಶದಾದ್ಯಂತ ಒಟ್ಟು 193.70 ಕೋಟಿ ಕೋವಿಡ್ ಲಸಿಕೆ ವಿತರಣೆ ಮಾಡಲಾಗಿದೆ.

ಹಲವು ದಿನಗಳಿಂದ 2 ಸಾವಿರದಂತೆ ಪತ್ತೆಯಾಗುತ್ತಿದ್ದ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ದಿಢೀರ್ ಏರಿಕೆ ಕಂಡುಬಂದಿದೆ. ಅದರಲ್ಲೂ ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಹೆಚ್ಚು ಪ್ರಕರಣಗಳು ವರದಿಯಾಗಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT