ಮಂಗಳವಾರ, ಮೇ 24, 2022
27 °C

India Covid Updates: ಹೊಸ ಪ್ರಕರಣಗಳ ಸಂಖ್ಯೆ ಶೇಕಡ 90ರಷ್ಟು ಹೆಚ್ಚಳ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: 24 ಗಂಟೆಗಳಲ್ಲಿ ದೇಶದಲ್ಲಿ 2,183 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಪ್ರಕರಣಗಳ ಸಂಖ್ಯೆಯಲ್ಲಿ ಸುಮಾರು ಶೇಕಡ 90ರಷ್ಟು ಹೆಚ್ಚಾಗಿರುವುದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆಯಿಂದ ತಿಳಿದುಬಂದಿದೆ.

ಭಾನುವಾರ 1,150 ಕೋವಿಡ್ ಪ್ರಕರಣಗಳು ದಾಖಲಾಗಿದ್ದವು. ಇನ್ನು, ದೇಶದಲ್ಲಿ ಒಂದೇ ದಿನ 214 ಮಂದಿ ಕೋವಿಡ್ ಸೋಂಕಿತರು ಅಸುನೀಗಿದ್ದಾರೆ.

ಕೇರಳವನ್ನು ಹೊರತುಪಡಿಸಿ, ರಾಜಧಾನಿ ದೆಹಲಿ, ಮಹಾರಾಷ್ಟ್ರ ಮತ್ತು ಹರಿಯಾಣ ರಾಜ್ಯಗಳಲ್ಲಿ ಕಳೆದ 24 ಗಂಟೆಗಳಲ್ಲಿ ಸೋಂಕಿನ ಪ್ರಕರಣಗಳ ಸಂಖ್ಯೆ ಮೂರು ಅಂಕಿ ದಾಟಿದೆ.
 

ಸದ್ಯ, ದೇಶದಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 11,542 ರಷ್ಟಿದ್ದು, 24 ಗಂಟೆಗಳಲ್ಲಿ 1,985 ಮಂದಿ ಚೇತರಿಸಿಕೊಂಡಿದ್ದಾರೆ.

ಈವರೆಗೆ ದೇಶದಲ್ಲಿ 186.52 ಕೋಟಿ ಡೋಸ್ ಕೋಟಿ ಲಸಿಕೆ ವಿತರಣೆ ಮಾಡಲಾಗಿದೆ.

ಇದನ್ನೂ ಒದಿ.. ದೆಹಲಿ ನಿವಾಸಿಗಳಲ್ಲಿ ಕೋವಿಡ್‌ ಪ್ರಸರಣ: 15 ದಿನಗಳಲ್ಲಿ ಶೇ 500ರಷ್ಟು ಹೆಚ್ಚಳ
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು