ಶುಕ್ರವಾರ, ಮೇ 27, 2022
27 °C

India Covid Updates: ಹೊಸ ಪ್ರಕರಣಗಳ ಸಂಖ್ಯೆ ಇಳಿಕೆ, 1 ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಸೋಮವಾರ ದಿಢೀರ್ ಏರಿಕೆ ಕಂಡಿದ್ದ ದೇಶದ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಮಂಗಳವಾರ ಇಳಿಕೆ ಕಂಡಿದೆ. 24 ಗಂಟೆಗಳ ಅವಧಿಯಲ್ಲಿ 1,247 ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ. ನಿನ್ನೆ 2 ಸಾವಿರಕ್ಕೂ ಹೆಚ್ಚು ಪ್ರಕರಣ ವರದಿಯಾಗಿದ್ದವು.

24 ಗಂಟೆಗಳ ಅವಧಿಯಲ್ಲಿ ಕೋವಿಡ್‌ನಿಂದ ಒಂದು ಸಾವು ಉತ್ತರ ಪ್ರದೇಶದಲ್ಲಿ ಸಂಭವಿಸಿದೆ. ಸೋಮವಾರ 214 ಸಾವುಗಳು ವರದಿಯಾಗಿದ್ದವು.

ದೇಶದ ಒಟ್ಟು ಸೋಂಕಿತರ ಸಂಖ್ಯೆ 4,30,45,527ಕ್ಕೆ ಏರಿದ್ದು, ಸದ್ಯ 11,860 ಸಕ್ರಿಯ ಪ್ರಕರಣಗಳಿವೆ. ಮೃತಪಟ್ಟ ಸೋಂಕಿತರ ಒಟ್ಟು ಸಂಖ್ಯೆ 5,21,966 ರಷ್ಟಾಗಿದೆ.

ದೇಶದಲ್ಲಿ ಸೋಂಕಿತರ ಪೈಕಿ ಶೇಕಡ 0.03ರಷ್ಟು ಸಕ್ರಿಯ ಪ್ರಕರಣಗಳಿವೆ. ರಾಷ್ಟ್ರೀಯ ಕೋವಿಡ್ ಚೇತರಿಕೆ ದರ 98.76ರಷ್ಟಿದೆ.

ಈವರೆಗೆ ದೇಶದಲ್ಲಿ186.72 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಣೆ ಮಾಡಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು