ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

India Covid Updates: ಹೊಸದಾಗಿ 16,678 ಪ್ರಕರಣ ದೃಢ

Last Updated 11 ಜುಲೈ 2022, 4:56 IST
ಅಕ್ಷರ ಗಾತ್ರ

ನವದೆಹಲಿ: 24 ಗಂಟೆಗಳಲ್ಲಿ ದೇಶದಲ್ಲಿ ಹೊಸದಾಗಿ 16,678 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,30,713ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಇದೇ ಅವಧಿಯಲ್ಲಿ 24 ಮಂದಿ ಸೋಂಕಿತರು ಸಾವಿಗೀಡಾಗಿದ್ದು, ಕೋವಿಡ್‌ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,25,454ಕ್ಕೆ ಏರಿದೆ.

ಒಟ್ಟು ಸೋಂಕಿತರ ಪೈಕಿ ಶೇಕಡ 0.30ರಷ್ಟು ಸಕ್ರಿಯ ಪ್ರಕರಣಗಳಿವೆ. ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇಕಡ 98.50ರಷ್ಟಿದೆ.

ದೈನಂದಿನ ಪಾಸಿಟಿವಿಟಿ ದರ ಶೇಕಡ 5.99 ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇಕಡ 4.18 ರಷ್ಟಿದೆ.

ದೇಶದಲ್ಲಿ ಈವರೆಗೆ 198.88 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಣೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT