ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

India Covid Updates: ಹೊಸದಾಗಿ 12,751 ಕೋವಿಡ್ ಪ್ರಕರಣಗಳು ದೃಢ

Last Updated 9 ಆಗಸ್ಟ್ 2022, 5:46 IST
ಅಕ್ಷರ ಗಾತ್ರ

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಹೊಸದಾಗಿ 12,751 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ. ಸೋಮವಾರ 16,167 ಪ್ರಕರಣಗಳು ವರದಿಯಾಗಿದ್ದವು.

ಇದೇ ಅವಧಿಯಲ್ಲಿ 42 ಮಂದಿ ಕೋವಿಡ್‌ನಿಂದ ಸಾವಿಗೀಡಾಗಿದ್ದು, ಮೃತಪಟ್ಟವರ ಒಟ್ಟು ಸಂಖ್ಯೆ 5,26,772 ರಷ್ಟಾಗಿದೆ.

ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1,31,807 ರಷ್ಟಿದೆ.

24 ಗಂಟೆಗಳಲ್ಲಿ 16,412 ರೋಗಿಗಳು ಗುಣಮುಖರಾಗಿದ್ದು, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇಕಡ 98.51 ರಷ್ಟಾಗಿದೆ.

ದೇಶದ ದೈನಂದಿನ ಕೋವಿಡ್ ಪಾಸಿಟಿವಿಟಿ ದರ ಶೇಕಡ 3.50 ರಷ್ಟಿದ್ದು, ವಾರದ ಪಾಸಿಟಿವಿಟಿ ದರ 4.69 ರಷ್ಟಿದೆ.

ದೇಶದಲ್ಲಿ ಈವರಗೆ 206.88 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಣೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT