ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update: 50 ಲಕ್ಷದತ್ತ ಸೋಂಕಿತರ ಸಂಖ್ಯೆ

Last Updated 15 ಸೆಪ್ಟೆಂಬರ್ 2020, 17:25 IST
ಅಕ್ಷರ ಗಾತ್ರ

ಬೆಂಗಳೂರು: ಭಾರತದ ಕೋವಿಡ್ -19 ಸೋಂಕು ಪ್ರಕರಣಗಳ ಸಂಖ್ಯೆ 50 ಲಕ್ಷ ಸಮೀಪಿಸಿದೆ. ಸಾವಿನ ಸಂಖ್ಯೆ 81,500 ದಾಟಿದೆ. ಆರೋಗ್ಯ ಸಚಿವಾಲಯದ ಪ್ರಕಾರ, ಭಾರತದ ಕ ಪಾಸಿಟಿವಿಟಿ ದರವು ಶೇಕಡಾ 8.4 ರಷ್ಟಿದೆ ಮತ್ತು ಕಡಿಮೆ ಮತ್ತು ಸಾವಿನ ಪ್ರಮಾಣ ಕುಸಿಯುತ್ತಿದೆ. ಲಾಕ್‌ಡೌನ್‌ನಿಂದಾಗಿ ಭಾರತವು 14-29 ಲಕ್ಷ ಪ್ರಕರಣಗಳನ್ನು ಮತ್ತು 37-78,000 ಸಾವುಗಳನ್ನು ನಿಯಂತ್ರಿಸುವಲ್ಲಿ ಯಶಸ್ವಿ ಆಗಿದೆ ಎಂದು ಸಚಿವಾಲಯ ಹೇಳಿದೆ.

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್‌–19 ದೃಢಪಟ್ಟ 83,809 ಹೊಸ ಪ್ರಕರಣಗಳು ದಾಖಲಾಗಿದ್ದು, ಇದೇ ಅವಧಿಯಲ್ಲಿ ಸೋಂಕಿನಿಂದ 1,054 ಮಂದಿ ಸಾವಿಗೀಡಾಗಿದ್ದಾರೆ.

ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ -19 ಚಿಕಿತ್ಸಾ ಶುಲ್ಕಕ್ಕೆ ಕಡಿವಾಣ ಹಾಕಿದ ಗೋವಾ
ಕೋವಿಡ್ -19 ಚಿಕಿತ್ಸೆಯನ್ನು ಒದಗಿಸಲು ಖಾಸಗಿ ಆಸ್ಪತ್ರೆಗಳು ವಿಧಿಸುವ ದುಬಾರಿ ಶುಲ್ಕದ ದೂರುಗಳ ಮಧ್ಯೆ, ಗೋವಾ ಸರ್ಕಾರ ಮಂಗಳವಾರ ಖಾಸಗಿ ಆರೋಗ್ಯ ಸೌಲಭ್ಯಗಳಿಗೆ ಬೆಲೆ ನಿಗದಿಪಡಿಸುವಂತೆ ಆದೇಶಿಸಿದೆ.

ಕೋವಿಡ್ -19 ಲಸಿಕೆಯ ಕ್ಲಿನಿಕಲ್ ಪ್ರಯೋಗ ಅಕ್ಟೋಬರ್‌ನಲ್ಲಿ
ನಾಲ್ಕನೇ ಕೋವಿಡ್ -19 ಲಸಿಕೆಯ ಕ್ಲಿನಿಕಲ್ ಪ್ರಯೋಗವು ಐಸಿಎಂಆರ್ ಪ್ರಯೋಗಾಲಯದ ಸಹಭಾಗಿತ್ವದಲ್ಲಿ ಅಕ್ಟೋಬರ್‌ನಲ್ಲಿ ಭಾರತದಲ್ಲಿ ಪ್ರಾರಂಭವಾಗಲಿದೆ.

ಈಗ ದೇಶದಲ್ಲಿ ಒಟ್ಟು ಕೊರೊನಾ ಸೋಂಕು ಪ್ರಕರಣಗಳ 49,30,237 ಪ್ರಕರಣಗಳ ಪೈಕಿ 9,90,061 ಸಕ್ರಿಯ ಪ್ರಕರಣಗಳಿದ್ದು, ಈವರೆಗೂ 38,59,400 ಮಂದಿ ಗುಣುಮುಖರಾಗಿದ್ದಾರೆ. ಸೋಂಕಿನಿಂದ 80,776 ಮಂದಿ ಮೃತಪಟ್ಟಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಈವರೆಗೂ ದೇಶದಾದ್ಯಂತ 5,83,12,273 ಗಂಟಲು ದ್ರವ ಮಾದರಿಗಳಿಗೆ ಕೋವಿಡ್‌ ಪರೀಕ್ಷೆ ನಡೆಸಲಾಗಿದೆ ಹಾಗೂ ಸೋಮವಾರ ಒಂದೇ ದಿನ 10,72,845 ಲಕ್ಷ ಪರೀಕ್ಷೆಗಳನ್ನು ಮಾಡಿರುವುದಾಗಿ ಐಸಿಎಂಆರ್‌ ತಿಳಿಸಿದೆ.


ಮಹಾರಾಷ್ಟ್ರದಲ್ಲಿ ಒಂದೇ ದಿನ 20,482 ಹೊಸ ಕೋವಿಡ್ -19 ಪ್ರಕರಣ
ಮಹಾರಾಷ್ಟ್ರದಲ್ಲಿ ಇಂದು 19,423 ರೋಗಿಗಳನ್ನು ಚೇತರಿಸಿಕೊಂಡಿದ್ದಾರೆ. ಈವರೆಗೆ 7,75,273 ಕೋವಿಡ್ -19 ರೋಗಿಗಳು ಚೇತರಿಸಿಕೊಂಡಿದ್ದಾರೆ.ರಾಜ್ಯದಲ್ಲಿ ಚೇತರಿಕೆ ಪ್ರಮಾಣ 70.62% ಆಗಿದೆ. ಒಂದೇ ದಿನ 20,482 ಪ್ರಕರಣಗಳು ವರದಿಯಾಗಿದ್ದು 515 ಮೃತಪಟ್ಟಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ 3,227 ಹೊಸ ಕೋವಿಡ್ ಪ್ರಕರಣವರದಿಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 2,09,146 ಆಗಿದೆ. ಅಸ್ಸಾಂನಲ್ಲಿ 2,409 ಕೋವಿಡ್ ಪ್ರಕರಣಗಳನ್ನು ವರದಿ ಆಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 1,46,575 ತಲುಪಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT