ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Upate: ಕೇರಳದಲ್ಲಿ 7,025 ಹೊಸ ಪ್ರಕರಣಗಳು

ಪ್ರಕರಣಗಳ ಸಂಖ್ಯೆ ಒಂದು ತಿಂಗಳಲ್ಲಿ ಶೇ 30 ಕುಸಿತ
Last Updated 1 ನವೆಂಬರ್ 2020, 16:52 IST
ಅಕ್ಷರ ಗಾತ್ರ

ನವದೆಹಲಿ: ಕೇರಳದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್‌–19 ದೃಢಪಟ್ಟ 7,025 ಹೊಸ ಪ್ರಕರಣಗಳು ದಾಖಲಾಗಿದ್ದು, ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 4.27 ಲಕ್ಷ ಮುಟ್ಟಿದೆ. ಇದುವರೆಗೂ 3.48 ಲಕ್ಷ ಜನರು ಕೋವಿಡ್‌ನಿಂದ ಗುಣಮುಖರಾಗಿದ್ದಾರೆ ಹಾಗೂ 1,512 ಮಂದಿ ಸಾವಿಗೀಡಾಗಿದ್ದಾರೆ. ಒಟ್ಟು 89,675 ಸಕ್ರಿಯ ಪ್ರಕರಣಗಳಿವೆ.

ಮಹಾರಾಷ್ಟ್ರದಲ್ಲಿ 5,369 ಹೊಸ ಪ್ರಕರಣಗಳು ದಾಖಲಾಗಿದೆ ಹಾಗೂ 3,726 ಮಂದಿ ಚೇತರಿಸಿಕೊಂಡಿದ್ದಾರೆ. ಒಟ್ಟು 16,83,775 ಪ್ರಕರಣಗಳ ಪೈಕಿ 15,14,079 ಮಂದಿ ಗುಣಮುಖರಾಗಿದ್ದಾರೆ. 1,25,109 ಸಕ್ರಿಯ ಪ್ರಕರಣಗಳಿದ್ದು, ಈವರೆಗೂ ಸೋಂಕಿನಿಂದ 44,000ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ.

ದೆಹಲಿಯಲ್ಲಿ 5,664 ಪ್ರಕರಣಗಳು, ಪಶ್ಚಿಮ ಬಂಗಾಳದಲ್ಲಿ 4,053 ಹಾಗೂ ಆಂಧ್ರ ಪ್ರದೇಶದಲ್ಲಿ 2,618 ಪ್ರಕರಣಗಳು ದಾಖಲಾಗಿವೆ.

ಭಾನುವಾರ ಬೆಳಗ್ಗಿನ ವರೆಗೂ ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 81.84 ಲಕ್ಷಕ್ಕೆ ಏರಿದ್ದು, ಸೆಪ್ಟೆಂಬರ್ ತಿಂಗಳಿಗೆ ಹೋಲಿಸಿದರೆಅಕ್ಟೋಬರ್ ತಿಂಗಳಿನಲ್ಲಿ ‌ಪ್ರಕರಣಗಳ ಸಂಖ್ಯೆಯಲ್ಲಿ ಶೇ 30ರಷ್ಟು ಇಳಿಕೆಯಾಗಿದೆ.

ಆರೋಗ್ಯ ಸಚಿವಾಲಯ ಭಾನುವಾರ ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ, ‌ಇದೇ ಅವಧಿಯಲ್ಲಿ ಕೋವಿಡ್‌ನಿಂದ ಚೇತರಿಸಿಕೊಂಡವರ ಸಂಖ್ಯೆ 74.91 ಲಕ್ಷಕ್ಕೆ ಏರಿಕೆಯಾಗಿದೆ.

ಒಂದು ದಿನದಲ್ಲಿಹೊಸದಾಗಿ 46,963 ಸೋಂಕು ಪ್ರಕರಣಗಳು ವರದಿಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 81,84,082 ಆಗಿದೆ. ಮತ್ತೆ, 470 ಸಾವು ಪ್ರಕರಣಗಳು ವರದಿಯಾಗಿದ್ದು, ಮೃತರ ಸಂಖ್ಯೆ 1,22,111ಕ್ಕೆ ಏರಿಕೆಯಾಗಿದೆ. ಅಕ್ಟೋಬರ್ ಮೊದಲ ವಾರದಿಂದ ಹೊಸದಾಗಿ ವ್ಯಾಪಿಸುತ್ತಿರುವ ಸೋಂಕು ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿಕೆ ಕಾಣುತ್ತಿದೆ.

ಅಕ್ಟೋಬರ್ ತಿಂಗಳಿನಲ್ಲಿ ಒಟ್ಟು18,71,498 ಪ್ರಕರಣಗಳು ದಾಖಲಾಗಿವೆ. ಸೆಪ್ಟೆಂಬರ್‌ನಲ್ಲಿ ಒಟ್ಟು 26,21,418 ಪ್ರಕರಣಗಳು ವರದಿಯಾಗಿದ್ದವು. ಒಟ್ಟು ಇಳಿಕೆ ಪ್ರಮಾಣ ಶೇ 22.87ರಷ್ಟು ಆಗಿದೆ ಎಂದು ತಿಳಿಸಿದೆ.

ಸಕ್ರಿಯವಾಗಿರುವ ಪ್ರಕರಣಗಳ ಸಂಖ್ಯೆ ಸತತ ಮೂರನೇ ದಿನ 6 ಲಕ್ಷಕ್ಕಿಂತಲೂ ಕಡಿಮೆ ಇದೆ. ಒಟ್ಟು ಪ್ರಕರಣಗಳಿಗೆ ಹೋಲಿಸಿದಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ ಶೇ 6.97ರಷ್ಟಿದೆ ಎಂದು ವಿವರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT