ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update: ದೇಶದಲ್ಲಿ 1.68 ಲಕ್ಷಕ್ಕೂ ಅಧಿಕ ಪ್ರಕರಣಗಳು

Last Updated 11 ಜನವರಿ 2022, 4:58 IST
ಅಕ್ಷರ ಗಾತ್ರ

ನವದೆಹಲಿ: ದೇಶದಾದ್ಯಂತ 24 ಗಂಟೆಗಳ ಅಂತರದಲ್ಲಿ ಕೋವಿಡ್‌–19 ದೃಢಪಟ್ಟ 1,68,063 ಹೊಸ ಪ್ರಕರಣಗಳು ವರದಿಯಾಗಿವೆ. ಇದೇ ಅವಧಿಯಲ್ಲಿ ಸೋಂಕಿನಿಂದ 277 ಮಂದಿ ಸಾವಿಗೀಡಾಗಿರುವುದು ಕೇಂದ್ರ ಆರೋಗ್ಯ ಇಲಾಖೆ ಪ್ರಕಟಣೆಯಿಂದ ತಿಳಿದು ಬಂದಿದೆ.

ಪ್ರಸ್ತುತ ದೇಶದಲ್ಲಿ 8,21,446 ಸಕ್ರಿಯ ಪ್ರಕರಣಗಳಿವೆ ಹಾಗೂ ಕೋವಿಡ್‌ ದೃಢ ಪ್ರಮಾಣ ಶೇಕಡ 10.64ರಷ್ಟಿದೆ.

24 ಗಂಟೆಗಳ ಅಂತರದಲ್ಲಿ 69,959 ಮಂದಿ ಚೇತರಿಸಿಕೊಂಡಿದ್ದಾರೆ. ಸೋಮವಾರ ಕೋವಿಡ್‌ ದೃಢಪಟ್ಟ 1,79,723 ಪ್ರಕರಣಗಳು ವರದಿಯಾಗಿದ್ದವು.

ಒಟ್ಟು 3.58 ಕೋಟಿಗೂ ಅಧಿಕ ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ ಓಮೈಕ್ರಾನ್‌ ದೃಢ ಪ್ರಕರಣಗಳ ಸಂಖ್ಯೆ 4,461ಕ್ಕೆ ಏರಿಕೆಯಾಗಿದೆ. ಈವರೆಗೂ ಸೋಂಕಿನಿಂದ 4,84,213 ಮಂದಿ ಮೃತಪಟ್ಟಿದ್ದಾರೆ.

ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ ಅರವತ್ತು ವರ್ಷ ವಯಸ್ಸಿಗೂ ಮೇಲ್ಪಟ್ಟ ನಾಗರಿಕರ ಪೈಕಿ ಮೊದಲ ದಿನ 9 ಲಕ್ಷಕ್ಕೂ ಹೆಚ್ಚು ಜನರು ಕೋವಿಡ್‌ ಲಸಿಕೆಯ ಮುನ್ನೆಚ್ಚರಿಕೆಯ ಡೋಸ್ ಹಾಕಿಸಿಕೊಂಡಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಈವರೆಗೂ ದೇಶದಾದ್ಯಂತ ಕೋವಿಡ್‌–19 ಲಸಿಕೆಯ 152.78 ಕೋಟಿ ಡೋಸ್‌ಗಳನ್ನು ಜನರಿಗೆ ಹಾಕಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT