ಮಂಗಳವಾರ, ಅಕ್ಟೋಬರ್ 20, 2020
23 °C

ಕೋವಿಡ್‌: ದೇಶದಲ್ಲಿ ಒಂದು ತಿಂಗಳಲ್ಲಿ ಗುಣಮುಖ ಪ್ರಮಾಣ ಶೇ 100ರಷ್ಟು ಹೆಚ್ಚಳ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ಕೋಲ್ಕತ್ತಾದಲ್ಲಿ ಕೊರೊನಾ ವೈರಸ್ ಸೋಂಕಿನಿಂದ ಗುಣಮುಖರಾದವರಿಗೆ ಆಸ್ಪತ್ರೆಯ ಸಿಬ್ಬಂದಿ ಬೀಳ್ಕೊಡುಗೆ ನೀಡುತ್ತಿರುವುದು

ಬೆಂಗಳೂರು: ದೇಶದಲ್ಲಿ ಕೊರೊನಾ ವೈರಸ್ ಸೋಂಕಿನಿಂದ 50 ಲಕ್ಷಕ್ಕೂ ಹೆಚ್ಚು ಜನರು ಗುಣಮುಖರಾಗಿದ್ದಾರೆ. ಕಳೆದ ಒಂದು ತಿಂಗಳಲ್ಲಿ ಭಾರತದಲ್ಲಿ ಗುಣಮುಖರಾಗುವ ಪ್ರಮಾಣ ಶೇ 100ಕ್ಕೆ ಸಮೀಪ ಏರಿಕೆಯಾಗಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ದೇಶದಲ್ಲಿ 61 ಲಕ್ಷಕ್ಕೂ ಅಧಿಕ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 50 ಲಕ್ಷಕ್ಕೂ ಹೆಚ್ಚು ಜನರು ಗುಣಮುಖರಾಗಿದ್ದಾರೆ. ಅಂದರೆ, ಒಟ್ಟು ಪ್ರಕರಣಗಳ ಪೈಕಿ ಶೇ 82ರಷ್ಟು ಪ್ರಕರಣಗಳಲ್ಲಿ ಸೋಂಕಿತರು ಚೇತರಿಸಿಕೊಂಡಿದ್ದಾರೆ.

ಪ್ರಸ್ತುತ ಸಕ್ರಿಯ ಪ್ರಕರಣಗಳು 10 ಲಕ್ಷಕ್ಕಿಂತ ಕಡಿಮೆ ಇದೆ ಹಾಗೂ 95 ಸಾವಿರಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ.

ಆಗಸ್ಟ್‌ 27ರಂದು ದೇಶದಲ್ಲಿ 25.23 ಲಕ್ಷ ಜನರು ಗುಣಮುಖರಾಗಿದ್ದರು. ಆ ಪ್ರಮಾಣ ಸೆಪ್ಟೆಂಬರ್‌ 17ಕ್ಕೆ 40 ಲಕ್ಷ ಹಾಗೂ ಸೆಪ್ಟೆಂಬರ್‌ 28ಕ್ಕೆ 50 ಲಕ್ಷ ದಾಟಿರುವುದಾಗಿ ಆರೋಗ್ಯ ಸಚಿವಾಲಯ ಮಾಹಿತಿ ಪ್ರಕಟಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು