ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update: ದೇಶದಲ್ಲಿ 8.67 ಲಕ್ಷ ಸಕ್ರಿಯ ಪ್ರಕರಣಗಳು

Last Updated 11 ಅಕ್ಟೋಬರ್ 2020, 5:29 IST
ಅಕ್ಷರ ಗಾತ್ರ

ಬೆಂಗಳೂರು: ದೇಶದಾದ್ಯಂತ ಕೋವಿಡ್‌ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 70 ಲಕ್ಷ ದಾಟಿದೆ. ಕಳೆದ 24 ಗಂಟೆಗಳಲ್ಲಿ 74,383 ಹೊಸ ಪ್ರಕರಣಗಳು ದಾಖಲಾಗಿವೆ ಹಾಗೂ ಸೋಂಕಿನಿಂದ 918 ಮಂದಿ ಮೃತಪಟ್ಟಿದ್ದಾರೆ.

ಒಟ್ಟು 70,53,807 ಪ್ರಕರಣಗಳ ಪೈಕಿ 8,67,496 ಸಕ್ರಿಯ ಪ್ರಕರಣಗಳಿದ್ದು, 60,77,977 ಮಂದಿ ಗುಣಮುಖರಾಗಿದ್ದಾರೆ. ಈವರೆಗೂ 1,08,334 ಮಂದಿ ಸಾವಿಗೀಡಾಗಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೆಲವು ದಿನಗಳಿಂದ ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚಿರುವ ಕೇರಳದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 96,003 ತಲುಪಿದೆ. ಈವರೆಗೂ ಸೋಂಕಿನಿಂದ 978 ಮಂದಿ ಸಾವಿಗೀಡಾಗಿದ್ದಾರೆ.

ಅಕ್ಟೋಬರ್ 10ರವರೆಗೂ ದೇಶದಲ್ಲಿ 8,68,77,242 ಗಂಟಲು ದ್ರವ ಮಾದರಿಗಳಿಗೆ ಕೋವಿಡ್‌ ಪರೀಕ್ಷೆ ನಡೆಸಲಾಗಿದೆ. ಶನಿವಾರ 10,78,544 ಕೋವಿಡ್‌ ಪರೀಕ್ಷೆಗಳನ್ನು ನಡೆಸಿರುವುದಾಗಿ ಐಸಿಎಂಆರ್‌ ತಿಳಿಸಿದೆ.

ಮಹಾರಾಷ್ಟ್ರದಲ್ಲಿ 2,21,615 ಸಕ್ರಿಯ ಪ್ರಕರಣಗಳು, ಕರ್ನಾಟಕದಲ್ಲಿ 1,20,948 ಪ್ರಕರಣಗಳು, ಆಂಧ್ರ ಪ್ರದೇಶದಲ್ಲಿ 46,624, ತಮಿಳುನಾಡಿನಲ್ಲಿ 44,150 ಹಾಗೂ ಉತ್ತರ ಪ್ರದೇಶದಲ್ಲಿ 40,210 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಸಚಿವಾಲಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT