ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಕ್ರೇನ್–ರಷ್ಯಾ ಸಂಘರ್ಷ ಶಮನಕ್ಕೆ ಬೆಂಬಲ ನೀಡಲು ಸಿದ್ಧ: ಭಾರತ

Last Updated 10 ಅಕ್ಟೋಬರ್ 2022, 13:19 IST
ಅಕ್ಷರ ಗಾತ್ರ

ನವದೆಹಲಿ: ಉಕ್ರೇನ್‌ ಮತ್ತು ರಷ್ಯಾ ಸಂಘರ್ಷ ಉಲ್ಬಣಗೊಂಡಿರುವ ಬಗ್ಗೆ ಭಾರತ ಕಳವಳ ವ್ಯಕ್ತಪಡಿಸಿದೆ. ಸಂಘರ್ಷ ಶಮನಕ್ಕೆ ಬೇಕಾದ ಎಲ್ಲ ಪ್ರಯತ್ನಗಳನ್ನು ಬೆಂಬಲಿಸಲು ಸಿದ್ಧವಿರುವುದಾಗಿ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರರು ಹೇಳಿದ್ದಾರೆ.

ಸೋಮವಾರ ಬೆಳಿಗ್ಗೆ ಉಕ್ರೇನ್‌ನ ಹಲವು ನಗರಗಳ ಮೇಲೆ ರಷ್ಯಾ ಕ್ರೂಸ್ ಕ್ಷಿಪಣಿಗಳ ದಾಳಿ ನಡೆಸಿದ್ದು, ಹಲವು ನಾಗರಿಕರನ್ನು ಕೊಂದಿದೆ. ಕ್ಷಿಪಣಿ ದಾಳಿಯಿಂದ ನಗರಗಳಲ್ಲಿ ವಿದ್ಯುತ್ ಮತ್ತು ನೀರಿನ ಸಂಪರ್ಕ ಕಡಿತಗೊಂಡಿವೆ. ರಷ್ಯಾ ಮತ್ತು ಕ್ರಿಮಿಯಾ ನಡುವಿನ ಸೇತುವೆ ಸ್ಪೋಟಕ್ಕೆ ಪ್ರತೀಕಾರವಾಗಿ ಈ ದಾಳಿ ನಡೆಸಲಾಗುತ್ತಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ.

‘ಹಗೆತನವನ್ನು ಹೆಚ್ಚಿಸುವುದು ಯಾರಿಗೂ ಒಳ್ಳೆಯದಲ್ಲ ಎಂಬ ಮಾತನ್ನು ನಾವು ಪುನರುಚ್ಚರಿಸುತ್ತೇವೆ. ಯುದ್ಧವನ್ನು ತಕ್ಷಣವೇ ನಿಲ್ಲಿಸಲು ಮತ್ತು ರಾಜತಾಂತ್ರಿಕತೆ ಹಾಗೂ ಮಾತುಕತೆ ಹಾದಿಗೆ ತುರ್ತು ಮರಳಲು ನಾವು ಒತ್ತಾಯಿಸುತ್ತೇವೆ’ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT