ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುಲ್ವಾಮ ದಾಳಿಕೋರ ಪಾಕ್ ಪ್ರಜೆಗೆ ಉಗ್ರ ಪಟ್ಟ

Last Updated 11 ಏಪ್ರಿಲ್ 2022, 17:11 IST
ಅಕ್ಷರ ಗಾತ್ರ

ನವದೆಹಲಿ: 2019ರಲ್ಲಿ ಜಮ್ಮು-ಕಾಶ್ಮೀರದಲ್ಲಿ 40 ಸಿಆರ್‌ಪಿಎಫ್ ಯೋಧರನ್ನು ಬಲಿಪಡೆದ ಪುಲ್ವಾಮ ದಾಳಿಯಲ್ಲಿ ಭಾಗಿಯಾಗಿದ್ದ ಪಾಕಿಸ್ತಾನದ ನಾಗರಿಕ ಮೊಹಿವುದ್ದೀನ್ ಔರಂಗಜೇಬ್‌ ಅಲಂ ಗಿರ್‌ನನ್ನು ಭಯೋತ್ಪಾದಕ ಎಂದು ಭಾರತ ಘೋಷಿಸಿದೆ.

ಈ ಸಂಬಂಧ ಸೋಮವಾರ ಅಧಿಸೂಚನೆ ಹೊರಡಿಸಿರುವ ಕೇಂದ್ರ ಗೃಹ ಇಲಾಖೆ, 2019ರ ಫೆಬ್ರುವರಿ 14ರಂದು ಸಿಆರ್‌ಪಿಎಫ್ ಬೆಂಗಾವಲು ವಾಹನಗಳ ಮೇಲಿನ ದುಷ್ಕೃತ್ಯದಲ್ಲಿ ಅಲಿಂ ಗಿರ್ ಅಲಿಯಾಸ್ ಮಕ್ತಾಬ್ ಅಮೀರ್, ಮುಜಾಹಿದ್ ಭಾಯ್ ಮತ್ತು ಮುಹಮ್ಮದ್ ಭಾಯ್ ಭಾಗಿಯಾಗಿದ್ದ ಎಂದು ಹೇಳಿದೆ. ಅಲ್ಲದೆ ಜೈಷ್-ಎ-ಮೊಹಮ್ಮದ್(ಜೆಇಎಂ) ಉಗ್ರ ಸಂಘಟನೆ ಪರವಾಗಿ ಭಾರತದ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT