ಭಾನುವಾರ, ಆಗಸ್ಟ್ 1, 2021
28 °C
ಆಪ್ಗಾನಿಸ್ತಾನದಲ್ಲಿ ಹೆಚ್ಚುತ್ತಿರುವ ತಾಲಿಬಾನ್‌ ಹಿಡಿತ

ಕಂದಹಾರ್‌ನಲ್ಲಿ ತಾಲಿಬಾನಿಗಳ ಅಟ್ಟಹಾಸ, ರಾಯಭಾರಿ ಸಿಬ್ಬಂದಿ ವಾಪಸ್‌ಗೆ ಭಾರತ ಕ್ರಮ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಆಫ್ಗಾನಿಸ್ತಾನದ ವಿವಿಧ ಪ್ರದೇಶಗಳ ಮೇಲೆ ತಾಲಿಬಾನ್‌ ತನ್ನ ಹಿಡಿತ ಸಾಧಿಸುತ್ತಿರುವುದನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವ ಭಾರತ, ಆಫ್ಗಾನಿಸ್ತಾನದ ಕಂದಹಾರ್‌ನಲ್ಲಿರುವ ತನ್ನ ಕಾನ್ಸುಲೇಟ್‌ ಕಚೇರಿಯ 50 ರಾಜತಾಂತ್ರಿಕ ಮತ್ತು ಭದ್ರತಾ ಸಿಬ್ಬಂದಿಯನ್ನು ಹಿಂದಕ್ಕೆ ಕರೆಸಿಕೊಳ್ಳಲು ಮುಂದಾಗಿದೆ.

ಆಫ್ಗಾನಿಸ್ತಾನದ ಪಶ್ಚಿಮ ಭಾಗದ ಬಹುತೇಕ ಭಾಗವನ್ನು ವಶಪಡಿಸಿಕೊಂಡಿರುವ ತಾಲಿಬಾನ್‌, ದಕ್ಷಿಣ ಭಾಗದ ಪ್ರದೇಶಗಳನ್ನೂ ತನ್ನ ಹಿಡಿತಕ್ಕೆ ತೆಗೆದುಕೊಳ್ಳುತ್ತಿರುವ ಬೆನ್ನಲ್ಲೇ ಭಾರತ ತನ್ನ ಕಾನ್ಸುಲೇಟ್‌ ಕಚೇರಿಯನ್ನು ತಾತ್ಕಾಲಿಕವಾಗಿ ಮುಚ್ಚುವ ಕ್ರಮಕ್ಕೆ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.

ಇಂಡೊ- ಟಿಬೆಟಿಯನ್ ಗಡಿ ಪೊಲೀಸ್ ಸಿಬ್ಬಂದಿ ಸೇರಿದಂತೆ ಭಾರತೀಯ ರಾಜತಾಂತ್ರಿಕರು, ಅಧಿಕಾರಿಗಳು ಮತ್ತು ಇತರ ಸಿಬ್ಬಂದಿಯನ್ನು ವಾಪಸ್ ಕರೆತರಲು ಭಾರತೀಯ ವಾಯುಪಡೆಯ ವಿಶೇಷ ವಿಮಾನವನ್ನು ಶನಿವಾರ ಕಳುಹಿಸಲಾಗಿದೆ ಎಂದು ಮೂಲಗಳು ಹೇಳಿವೆ.

ಕಾಬೂಲ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಕಳೆದ ಮಂಗಳವಾರವಷ್ಟೇ ಕಂದಹಾರ್‌ ಮತ್ತು ಮುಜಾರ್‌–ಎ–ಷರೀಫ್‌ನಲ್ಲಿರುವ ಕಾನ್ಸುಲೇಟ್ ಕಚೇರಿಗಳನ್ನು ಮುಚ್ಚುವ ಯೋಜನೆ ಇಲ್ಲ ಎಂದು ಹೇಳಿತ್ತು.

ಆಫ್ಗಾನಿಸ್ತಾನದಲ್ಲಿ ಹದಗೆಡುತ್ತಿರುವ ಭದ್ರತಾ ಪರಿಸ್ಥಿತಿ ಮತ್ತು ಅಲ್ಲಿರುವ ಭಾರತೀಯ ಪ್ರಜೆಗಳ ಸುರಕ್ಷತೆಯ ವಿಷಯವನ್ನು ಭಾರತ ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಸರಿಯಾದ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುವುದಾಗಿ ಗುರುವಾರವಷ್ಟೇ ಭಾರತೀಯ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್‌ ಬಾಗ್ಚಿ ತಿಳಿಸಿದ್ದರು.

ಶಾಂತಿ ಸ್ಥಾಪನೆ ಉದ್ದೇಶದಿಂದ ಎರಡು ದಶಕಗಳಿಂದ ಇಲ್ಲಿ ನೆಲೆಯೂರಿದ್ದ ಅಮೆರಿಕ ಪಡೆಗಳು ವಾಪಸಾಗುತ್ತಿವೆ. ಆಗಸ್ಟ್‌ ವೇಳೆಗೆ ಪೂರ್ಣ ಪ್ರಮಾಣದಲ್ಲಿ ಅಮೆರಿಕ ಪಡೆಗಳು ಹಿಂದಿರುಗಲಿವೆ. ಇದರ ಬೆನ್ನಲ್ಲೆ ಕಳೆದ ವಾರ ಆಫ್ಗಾನಿಸ್ತಾನದಲ್ಲಿ ಸರಣಿ ಭಯೋತ್ಪಾದಕ ದಾಳಿಗಳು ನಡೆದಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು