ಬುಧವಾರ, ಸೆಪ್ಟೆಂಬರ್ 22, 2021
27 °C

ರೂಪಾಂತರ ಕೊರೊನಾ ವೈರಸ್| ಬ್ರಿಟನ್‌ನಿಂದ ಬರುವ ವಿಮಾನಗಳಿಗೆ ಜ.7ರ ವರೆಗೆ ನಿರ್ಬಂಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ರೂಪಾಂತರ ಕೊರೊನಾ ವೈರಸ್‌ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಬ್ರಿಟನ್‌ನಿಂದ ಬರುವ ಪ್ರಯಾಣಿಕರ ವಿಮಾನಗಳ ಸಂಚಾರವನ್ನು ಜನವರಿ 7ರವರೆಗೂ ಸ್ಥಗಿತಗೊಳಿಸಲಾಗಿದೆ.

ಜನವರಿ 7ರ ಬಳಿಕ ಕಠಿಣ ನಿಯಮಗಳನ್ನು ಜಾರಿಗೊಳಿಸಿ ವಿಮಾನ ಸಂಚಾರವನ್ನು ಪುನರಾರಂಭಿಸಲಾಗುವುದು ಎಂದು ನಾಗರಿಕ ವಿಮಾನಯಾನ ಸಚಿವ ಹರದೀಪ್‌ ಸಿಂಗ್‌ ಪುರಿ ಬುಧವಾರ ತಿಳಿಸಿದ್ದಾರೆ.

ಕಳೆದ ವಾರ ನಾಗರಿಕ ವಿಮಾನಯಾನ ಸಚಿವಾಲಯವು ಭಾರತ ಮತ್ತು ಬ್ರಿಟನ್‌ ನಡುವೆ ಸಂಚರಿಸುವ ಎಲ್ಲ ವಿಮಾನಗಳನ್ನು ಡಿಸೆಂಬರ್‌ 23ರಿಂದ 31ರವರೆಗೆ ಸ್ಥಗಿತಗೊಳಿಸಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು