ಬುಧವಾರ, 7 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಸಂಕಷ್ಟ: ವಿದೇಶಿಗರ ವೀಸಾ ಅವಧಿ ವಿಸ್ತರಿಸಿದ ಭಾರತ

Last Updated 2 ಸೆಪ್ಟೆಂಬರ್ 2021, 22:43 IST
ಅಕ್ಷರ ಗಾತ್ರ

ನವದೆಹಲಿ: ಕೋವಿಡ್ ಪಿಡುಗಿನಿಂದಾಗಿ ಭಾರತದಲ್ಲಿ ಸಿಲುಕಿರುವ ವಿದೇಶಿ ಪ್ರಜೆಗಳ ವೀಸಾ ಅವಧಿಯನ್ನು ಸರ್ಕಾರ ಇದೇ 30ರವರೆಗೆ ವಿಸ್ತರಿಸಿದೆ.

2020ರ ಮಾರ್ಚ್‌ಗಿಂತ ಮೊದಲು ವಿವಿಧ ರೀತಿಯ ವೀಸಾಗಳಲ್ಲಿ ಭಾರತಕ್ಕೆ ಬಂದ ಹಲವು ವಿದೇಶಿಯರು ಸಾಂಕ್ರಾಮಿಕ ರೋಗದಿಂದಾಗಿ ಇಲ್ಲಿಯೇ ಉಳಿಯಬೇಕಾಯಿತು. ವಿಮಾನಗಳ ಸಂಚಾರ ಸ್ಥಗಿತವಾಗಿದ್ದರಿಂದ ಅವರಿಗೆ ತಮ್ಮ ದೇಶಗಳಿಗೆ ಹೋಗಲು ಸಾಧ್ಯವಾಗಲಿಲ್ಲ. ಹಾಗಾಗಿ ಅಂಥವರ ವೀಸಾ ಅವಧಿಯನ್ನು ಸರ್ಕಾರ ವಿಸ್ತರಿಸಿದೆ ಎಂದು ಗೃಹ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.

2021ರ ಆಗಸ್ಟ್‌ 31ಕ್ಕೆ ಮುಕ್ತಾಯವಾಗಿರುವ ವಿದೇಶಿಗರ ವೀಸಾ ಅವಧಿಯನ್ನು ಇದೇ 30ರವರೆಗೆ ವಿಸ್ತರಿಸಲಾಗಿದೆ. ಇದಕ್ಕಾಗಿ ವಿದೇಶಿಗರು ಯಾವುದೇ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ ಎಂದು ವಕ್ತಾರರು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT