ನವದೆಹಲಿ: ಸೀರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ತಯಾರಿಸಿದ ಆಸ್ಟ್ರಾಜೆನೆಕಾ ಕೋವಿಡ್-19 ಲಸಿಕೆ ರಫ್ತು ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಭಾರತ ಸರ್ಕಾರ ನಿರ್ಧರಿಸಿದೆ. ದೇಶದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಲಸಿಕೆ ಬೇಡಿಕೆಯನ್ನು ಪೂರೈಸುವ ಸಲುವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ.

ಇದರಿಂದ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ಒ) ಬೆಂಬಲಿತ 180ಕ್ಕೂ ರಾಷ್ಟ್ರಗಳಿಗೆ ಲಸಿಕೆ ಪೂರೈಸುವ 'ಕೋವ್ಯಾಕ್ಸ್' ಕೋವಿಡ್ ಲಸಿಕೆ ಸರಬುರಾಜಿನ ಮೇಲೆ ಪರಿಣಾಮ ಬೀರಲಿದೆ ಎಂದು ರಾಯಿಟರ್ಸ್ ಸುದ್ದಿ ಸಂಸ್ಥೆ ವರದಿ ಮಾಡಿವೆ.

ಕೋವ್ಯಾಕ್ಸ್ ಇದುವರೆಗೆ ಸೀರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದಿಂದ 17.7 ಮಿಲಿಯನ್ ಆಸ್ಟ್ರಾಜೆನೆಕಾ ಕೋವಿಡ್ ಲಸಿಕೆ ಡೋಸ್ಗಳನ್ನು ಪಡೆದಿವೆ. ಭಾರತವು ಒಟ್ಟು 60.5 ಮಿಲಿಯನ್ ಡೋಸ್ಗಳನ್ನು ರಫ್ತು ಮಾಡಿದೆ. ಅನೇಕ ರಾಷ್ಟ್ರಗಳ ನಾಗರಿಕರು ಕೋವ್ಯಾಕ್ಸ್ ಅಭಿಯಾನವನ್ನು ಅವಲಂಬಿಸಿದ್ದು, ಈ ಮೂಲಕ ಕೋವಿಡ್ ಲಸಿಕೆಯನ್ನು ಪಡೆಯುವ ಗುರಿ ಹೊಂದಿದ್ದಾರೆ.

ಇದನ್ನೂ ಓದಿ:ಭಾರತದಲ್ಲಿ ಕೊರೊನಾ ವೈರಸ್ನ ಹೊಸ ರೂಪಾಂತರ ತಳಿಗಳು ಪತ್ತೆ

ಗುರುವಾರದಿಂದ ಭಾರತದಿಂದ ಯಾವುದೇ ಲಸಿಕೆ ರಫ್ತು ನಡೆದಿಲ್ಲ ಎಂದು ವಿದೇಶಾಂಗ ಸಚಿವಾಲಯದ ವೆಬ್ಸೈಟ್ನ ಮಾಹಿತಿಯಿಂದ ತಿಳಿದು ಬಂದಿದೆ. ಇನ್ನೊಂದೆಡೆ ಭಾರತದಲ್ಲಿ ಬೇಡಿಕೆ ಹೆಚ್ಚಾಗಿದ್ದು, ದೇಶದಲ್ಲಿ ಕೋವಿಡ್ ಲಸಿಕೆ ಪೂರೈಸುವ ಪ್ರಯತ್ನ ನಡೆಯುತ್ತಿದೆ.

ಭಾರತದಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬರುವ ವರೆಗೂ ರಫ್ತು ಮಾಡಲು ಸಾಧ್ಯವಿಲ್ಲ. ದೇಶದಲ್ಲಿ ಅನೇಕರಿಗೆ ಕೋವಿಡ್ ಲಸಿಕೆ ಹಾಕುವ ಅಗತ್ಯವಿರುವುದರಿಂದ ಅಲ್ಲಿಯ ವರೆಗೆ ರಫ್ತು ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲಾಗುವುದು ಎಂಬುದು ತಿಳಿದು ಬಂದಿದೆ.

ಹಾಗಿದ್ದರೂ ಭಾರತೀಯ ವಿದೇಶಾಂಗ ಸಚಿವಾಲಯ ಮತ್ತು ವಿಶ್ವದ ಅತಿ ದೊಡ್ಡ ಔಷಧಿ ತಯಾರಕಾ ಸಂಸ್ಥೆ ಸೀರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಈ ಕುರಿತು ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.