ಸೋಮವಾರ, ನವೆಂಬರ್ 30, 2020
21 °C

ಮೋದಿ ನೀತಿಯಿಂದಾಗಿ ದೇಶದಲ್ಲಿ ಆರ್ಥಿಕ ಹಿಂಜರಿತ : ರಾಹುಲ್‌ ಟೀಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನೀತಿ ನಿಯಮಾವಳಿಯಿಂದಾಗಿ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ರಾಷ್ಟ್ರವು ಆರ್ಥಿಕ ಹಿಂಜರಿತವನ್ನು ಅನುಭವಿಸಬೇಕಾಗಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಗುರುವಾರ ಟೀಕಿಸಿದ್ದಾರೆ.

ಮೋದಿ ಅವರ ಕಾರ್ಯಕ್ರಮಗಳು ಭಾರತದ ಸದೃಢ ಆರ್ಥಿಕ ವ್ಯವಸ್ಥೆಯನ್ನು ದುರ್ಬಲಗೊಳಿಸಿವೆ ಎಂದು ಅವರು ಟ್ವಿಟರ್‌ನಲ್ಲಿ ಹೇಳಿದ್ದಾರೆ.

ಜುಲೈ– ಸೆಪ್ಟೆಂಬರ್‌ ತ್ರೈಮಾಸಿಕ ಅವಧಿಯಲ್ಲಿ ಜಿಡಿಪಿ  8.6ರಷ್ಟು ಕುಸಿಯುವ ಸಾಧ್ಯತೆಯಿದೆ ಎಂದಿರುವ ಆರ್‌ಬಿಐ ವರದಿಯನ್ನುಅವರು ಪ್ರಸ್ತಾಪಿಸಿದ್ದಾರೆ. ತಾಂತ್ರಿಕ ನೆಲೆಯಲ್ಲಿ ಭಾರತದ ಆರ್ಥಿಕತೆ ಹಿಂಜರಿತವನ್ನು ಪ್ರವೇಶಿಸುವ ಸಂಭವ ಇದೆ.  ಆರ್ಥಿಕತೆ ಹಿಂದೆಂದೂ ಹೀಗೆ ಆಗಿರಲಿಲ್ಲ ಎಂದು ರಾಹುಲ್ ಅಭಿಪ್ರಾಯ ಪಟ್ಟಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು