ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update: ಕೇರಳದಲ್ಲಿ ಪ್ರಕರಣ ಏರಿಕೆ, ತಪ್ಪೀತೆ ನಿಯಂತ್ರಣ?

Last Updated 26 ಸೆಪ್ಟೆಂಬರ್ 2020, 16:22 IST
ಅಕ್ಷರ ಗಾತ್ರ

ಬೆಂಗಳೂರು: ಶನಿವಾರ ಸಹ ಕೇರಳದಲ್ಲಿ ಕೋವಿಡ್‌–19 ದೃಢಪಟ್ಟ 7,006 ಹೊಸ ಪ್ರಕರಣಗಳು ದಾಖಲಾಗಿವೆ. ಕಳೆದ 24 ಗಂಟೆಗಳಲ್ಲಿ 3,199 ಮಂದಿ ಗುಣಮುಖರಾಗಿದ್ದು 21 ಮಂದಿ ಸಾವಿಗೀಡಾಗಿದ್ದಾರೆ.

ಕೇರಳದಲ್ಲಿ ನಿಯಂತ್ರಣದಲ್ಲಿದ್ದ ಕೊರೊನಾ ವೈರಸ್‌ ಸೋಂಕು, ಕಳೆದ ಕೆಲ ದಿನಗಳಿಂದ ದಿಢೀರ್‌ ಏರಿಕೆ ಕಂಡಿದೆ. ಈವರೆಗೂ 1,14,530 ಮಂದಿ ಗುಣಮುಖರಾಗಿದ್ದಾರೆ ಹಾಗೂ 52,678 ಸಕ್ರಿಯ ಪ್ರಕರಣಗಳಿರುವುದಾಗಿ ಕೇರಳ ಸರ್ಕಾರ ತಿಳಿಸಿದೆ.

ದೇಶದಲ್ಲಿ ಅತಿ ಹೆಚ್ಚು ಪ್ರಕರಣಗಳಿರುವ ಮಹಾರಾಷ್ಟ್ರದಲ್ಲೂ ಸೋಂಕಿನ ಪ್ರಭಾವ ಮುಂದುವರಿದಿದೆ. ಕಳೆದ 24 ಗಂಟೆಗಳಲ್ಲಿ 20,419 ಹೊಸ ಪ್ರಕರಣಗಳು ದಾಖಲಾಗಿದ್ದು, 23,644 ಮಂದಿ ಗುಣಮುಖರಾಗಿದ್ದಾರೆ ಹಾಗೂ 430 ಮಂದಿ ಸಾವಿಗೀಡಾಗಿದ್ದಾರೆ. 10,16,450 ಮಂದಿ ಸೋಂಕಿನಿಂದ ಗುಣಮುಖರಾಗಿದ್ದರೆ, 2,69,119 ಸಕ್ರಿಯ ಪ್ರಕರಣಗಳಿವೆ ಹಾಗೂ 35,191 ಮಂದಿ ಮೃತಪಟ್ಟಿದ್ದಾರೆ.

ಆಂಧ್ರ ಪ್ರದೇಶದಲ್ಲಿ 9,125 ಮಂದಿ ಗುಣಮುಖರಾಗಿದ್ದು, 7,293 ಪ್ರಕರಣಗಳು ದಾಖಲಾಗಿವೆ. ತಮಿಳುನಾಡಿನಲ್ಲಿ 5,647 ಹೊಸ ಪ್ರಕರಣಗಳು, ರಾಜಸ್ಥಾನದಲ್ಲಿ 2,045 ಪ್ರಕರಣಗಳು, ಗುಜರಾತ್‌ನಲ್ಲಿ 1,417 ಪ್ರಕರಣಗಳು, ಪಂಜಾಬ್‌ನಲ್ಲಿ 1,588 ಪ್ರಕರಣಗಳು ಹಾಗೂ ಜಮ್ಮು ಮತ್ತು ಕಾಶ್ಮೀರದಲ್ಲಿ 1,217 ಪ್ರಕರಣಗಳು ದಾಖಲಾಗಿವೆ.

ಶನಿವಾರ ಬೆಳಿಗ್ಗೆ ವರೆಗೂ ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಒಟ್ಟು 85,362 ಕೋವಿಡ್‌ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಭಾರತದ ಒಟ್ಟಾರೆ ಕೋವಿಡ್‌ ಪ್ರಕರಣಗಳ ಸಂಖ್ಯೆ 59,03,933ಕ್ಕೆ ತಲುಪಿದೆ.

ಇದೇ ಅವಧಿಯಲ್ಲಿ ದೇಶದಾದ್ಯಂತ 1,089 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಇದುವರೆಗೆ ಕೋವಿಡ್‌ಗೆ 93,379 ಮಂದಿ ಜೀವತೆತ್ತಂತಾಗಿದೆ.

59,03,933 ಸೋಂಕು ಪ್ರಕರಣಗಳಲ್ಲಿ 9,60,969 ಪ್ರಕರಣಗಳು ಸಕ್ರಿಯವಾಗಿದ್ದು, 48,49,585 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.

ಇನ್ನು ಕಳೆದ ಒಂದು ದಿನದ ಅವಧಿಯಲ್ಲಿ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆ(ಐಸಿಎಂಆರ್‌) 13,41,535 ಮಾದರಿಗಳನ್ನು ಪರೀಕ್ಷೆ ನಡೆಸಿದೆ. ಈ ವರೆಗೆ 7,02,69,975 ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT