ಸೋಮವಾರ, ಮೇ 23, 2022
24 °C
ಪ್ರಧಾನಮಂತ್ರಿ ನರೇಂದ್ರ ಮೋದಿ ಅಭಿಮತ

ಇಂಗಾಲ ಹೊರಸೂಸುವಿಕೆ ಪ್ರಮಾಣ ತಗ್ಗಿಸುವ ಗುರಿ ಹೊಂದಿದೆ ಭಾರತ: ಪ್ರಧಾನಿ ಮೋದಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಗಾಂಧಿನಗರ: ‘ಭಾರತ ಮುಂದಿನ ದಿನಗಳಲ್ಲಿ ಇಂಗಾಲದ ಹೊರಸೂಸುವಿಕೆಯ ಪ್ರಮಾಣವನ್ನು(ಇಂಗಾಲದ ಹೆಜ್ಜೆ ಗುರುತುಗಳು) ಶೇಕಡಾ 30 ರಿಂದ 35 ರಷ್ಟು ಕಡಿಮೆ ಮಾಡುವ ಗುರಿ ಹೊಂದಿದೆ‘ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ.

ವಿಡಿಯೊ ಕಾನ್ಫರೆನ್ಸ್‌ ಮೂಲಕ ಪಂಡಿತ್ ದೀನ್‌ದಯಾಳ್ ಪೆಟ್ರೋಲಿಯಂ ವಿಶ್ವವಿದ್ಯಾಲಯದ ಘಟಿಕೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಭಾರತ ಶೇ 30 ರಿಂದ 35ರಷ್ಟು ಇಂಗಾಲದ ಹೊರಸೂಸುವಿಕೆ ಪ್ರಮಾಣ ಕಡಿತಗೊಳಿಸಲಿದೆ ಎಂಬ ವಿಷಯವನ್ನು ಜಾಗತಿಕ ಮಟ್ಟದ ಕಾರ್ಯಕ್ರಮದಲ್ಲಿ ಹೇಳಿದಾಗ, ಎಲ್ಲರೂ ಅಚ್ಚರಿ ವ್ಯಕ್ತಪಡಿಸಿದದರು. ಜತೆಗೆ, ಇದು ಭಾರತದಿಂದ ಸಾಧ್ಯವೇ‘ ಎಂದು ಕೇಳಿದ್ದರು ಎಂದು ಮೋದಿ ನೆನಪಿಸಿಕೊಂಡರು.

‘ಈ ದಶಕದಲ್ಲಿ ನೈಸರ್ಗಿಕ ಅನಿಲ ಬಳಕೆಯನ್ನು ನಾಲ್ಕು ಬಾರಿ ಹೆಚ್ಚಿಸಲಾಗಿದೆ. ಮುಂದಿನ ಐದು ವರ್ಷಗಳಲ್ಲಿ ತೈಲ ಸಂಸ್ಕರಣಾ ಸಾಮರ್ಥ್ಯವನ್ನು ದ್ವಿಗುಣಗೊಳಿಸುವ ಕೆಲಸವೂ ನಡೆಯುತ್ತಿದೆ‘ ಎಂದು ಅವರು ಹೇಳಿದರು.

’ಇಂಧನ ಕ್ಷೇತ್ರದಲ್ಲಿ ಸ್ಟಾರ್ಟ್‌ಅಪ್‌ಗಳನ್ನು ಬಲಪಡಿಸುವ ಕೆಲಸ ನಿರಂತರವಾಗಿ ನಡೆಯುತ್ತಿದೆ. ಈ ಉದ್ದೇಶಕ್ಕಾಗಿ ವಿಶೇಷ ನಿಧಿಯನ್ನು ತೆಗೆದಿರಿಸಲಾಗಿದೆ. ನಿಮ್ಮಲ್ಲಿ ಹೊಸ ಯೋಚನೆ, ಯೋಜನೆ, ಪರಿಕಲ್ಪನೆಗಳಿದ್ದರೆ, ಈ ವಿಶೇಷ ನಿಧಿ ನಿಮಗೆ ಉತ್ತಮ ಅವಕಾಶ ಒದಗಿಸುತ್ತದೆ. ಇದು ಸರ್ಕಾರ ನೀಡುವ ಉಡುಗೊರೆಯಾಗಲಿದೆ‘ ಎಂದು ಹೇಳಿದರು.

‘ಈ ದಶಕದಲ್ಲಿ ತೈಲ ಮತ್ತು ಅನಿಲ ಕ್ಷೇತ್ರದಲ್ಲಿ ಕೋಟಿಗಟ್ಟಲೆ ಹಣ ಹೂಡಿಕೆ ಮಾಡಲಾಗುವುದು. ಆದ್ದರಿಂದ ಈ ಕ್ಷೇತ್ರದಲ್ಲಿ ನಿಮಗೆ ಸಾಕಷ್ಟು ಅವಕಾಶಗಳಿವೆ‘ ಎಂದು ಉದ್ದಿಮೆದಾರರಿಗೆ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು