ಶನಿವಾರ, ಸೆಪ್ಟೆಂಬರ್ 19, 2020
22 °C

ಆಂತರಿಕ ವ್ಯವಹಾರಗಳಲ್ಲಿ ಹಸ್ತಕ್ಷೇಪ ಬೇಡ: ಚೀನಾ ವಿರುದ್ಧ ಹರಿಹಾಯ್ದ ಭಾರತ

ಪಿಟಿಐ Updated:

ಅಕ್ಷರ ಗಾತ್ರ : | |

India China

ನವದೆಹಲಿ: ‘ಆಂತರಿಕ ವ್ಯವಹಾರಗಳಲ್ಲಿ ಅನಗತ್ಯವಾಗಿ ಹಸ್ತಕ್ಷೇಪ ಮಾಡುವುದನ್ನು ನಿಲ್ಲಿಸಿ’ ಎಂದು ಭಾರತವು ಚೀನಾಕ್ಕೆ ಗುರುವಾರ ತಿರುಗೇಟು ನೀಡಿದೆ.

ಬುಧವಾರ ನಡೆದ ವಿಶ್ವಸಂಸ್ಥೆ ಭದ್ರತಾ ಮಂಡಳಿ (ಯುಎನ್‌ಎಸ್‌ಸಿ) ಸಭೆಯಲ್ಲಿ ಕಾಶ್ಮೀರದ ವಿಷಯವನ್ನು ಚರ್ಚಿಸುವಂತೆ ಪಾಕಿಸ್ತಾನ ಒತ್ತಾಯಿಸಿತ್ತು. ಇದಕ್ಕೆ ಚೀನಾ ಬೆಂಬಲ ಸೂಚಿಸಿತ್ತು. ಆದರೆ ಉಭಯ ರಾಷ್ಟ್ರಗಳ ಈ ಪ್ರಯತ್ನಕ್ಕೆ ಯಶಸ್ಸು ಸಿಕ್ಕಿರಲಿಲ್ಲ.

‘ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶಕ್ಕೆ ಸಂಬಂಧಿಸಿದಂತೆ ಚರ್ಚಿಸಬೇಕೆಂದು ಚೀನಾವು ವಿಶ್ವಸಂಸ್ಥೆ ಭದ್ರತಾ ಕೌನ್ಸಿಲ್‌ಗೆ ಮನವಿ ಮಾಡಿರುವುದು ನಮ್ಮ ಗಮನಕ್ಕೆ ಬಂದಿದೆ. ಚೀನಾ ಈಗಾಗಲೇ ಅನೇಕ ಬಾರಿ ಇಂತಹ ಪ್ರಯತ್ನಗಳನ್ನು ಮಾಡಿದೆ. ಆ ರಾಷ್ಟ್ರವು ನಮ್ಮ ಆಂತರಿಕ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡದಿರುವುದು ಒಳಿತು’ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಪ್ರಕಟಣೆಯಲ್ಲಿ ತಿಳಿಸಿದೆ. 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು