ಮಂಗಳವಾರ, ಆಗಸ್ಟ್ 9, 2022
23 °C

ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ: ಯೆಚೂರಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ದೇಶದಲ್ಲಿ ‘ಅಘೋಷಿತ ತುರ್ತು ಪರಿಸ್ಥಿತಿ’ ಇದ್ದು, 1975ರ ತುರ್ತು ಪರಿಸ್ಥಿತಿಯಂತೆ ಇದನ್ನು ಸಹ ಸೋಲಿಸಲಾಗುವುದು ಎಂದು ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಭಾನುವಾರ ಹೇಳಿದ್ದಾರೆ.

1975ರಲ್ಲಿ ಕಾಂಗ್ರೆಸ್‌ ಅಧಿಕಾರಾವಧಿಯಲ್ಲಿ ಹೇರಿದ್ದ ತುರ್ತು ಪರಿಸ್ಥಿತಿಯನ್ನು ಹೇಗೆ ಸೋಲಿಸಲಾಯಿತು ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮಾಸಿಕ ರೇಡಿಯೊ ಕಾರ್ಯಕ್ರಮ 'ಮನ್ ಕಿ ಬಾತ್'ನಲ್ಲಿ ಉಲ್ಲೇಖಿಸಿದ್ದರು, ಇದಕ್ಕೆ ಪ್ರತಿಕ್ರಿಯಿಸಿ ಯೆಚೂರಿ ಅವರು ಈ ಹೇಳಿಕೆ ನೀಡಿದ್ದಾರೆ.

‘ಪ್ರಜಾಪ್ರಭುತ್ವಕ್ಕೆ ಅಚ್ಚೇ ದಿನ್‌ ಮರಳಿ ಬರಲಿದೆ. ಇದಕ್ಕಾಗಿ ಹೋರಾಟವು ಮುಂದುವರಿದಿದ್ದು, ಅದು ತೀವ್ರಗೊಳ್ಳಲಿದೆ’ ಎಂದೂ ಯೆಚೂರಿ ಅವರು ಟ್ವೀಟ್‌ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು