ಬುಧವಾರ, 31 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

COVID-19 Update: 1,573 ಹೊಸ ಪ್ರಕರಣಗಳು ದಾಖಲು

Last Updated 28 ಮಾರ್ಚ್ 2023, 5:45 IST
ಅಕ್ಷರ ಗಾತ್ರ

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಕೋವಿಡ್ ದೃಢಪಟ್ಟ 1,573 ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಒಟ್ಟು ಸಕ್ರಿಯ ಕೊರೊನಾ ಪ್ರಕರಣಗಳ ಸಂಖ್ಯೆ 10,981ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಪ್ರಕಟಣೆಯಿಂದ ತಿಳಿದುಬಂದಿದೆ.

ದಿನದ ಕೊರೊನಾ ಪಾಸಿಟಿವಿಟಿ ದರ ಶೇ 1.30 ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ 1.47 ಆಗಿದೆ. 24 ಗಂಟೆಗಳಲ್ಲಿ ಕೇರಳದಲ್ಲಿ ನಾಲ್ಕು ಜನರು ಸೋಂಕಿನಿಂದ ಮೃತಪಟ್ಟಿದ್ದು, ಕೋವಿಡ್‌ನಿಂದ ಈವರೆಗಿನ ಮೃತರ ಒಟ್ಟು ಸಂಖ್ಯೆ 5,30,841ಕ್ಕೆ ಏರಿದೆ.

ಇಲ್ಲಿಯವರೆಗೆ ದೇಶದಾದ್ಯಂತ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 4,47,07,525 ದಾಖಲಾಗಿದೆ. ಇದರಲ್ಲಿ 4,41,65,703 ಜನರು ಗುಣಮುಖರಾಗಿರುತ್ತಾರೆ.

ಒಟ್ಟು ಸೋಂಕಿತರ ಪೈಕಿ ಶೇ 0.02 ಸಕ್ರಿಯ ಪ್ರಕರಣಗಳಿವೆ. ಹಾಗೆಯೇ ರಾಷ್ಟ್ರೀಯ ಕೋವಿಡ್ ಚೇತರಿಕೆಯ ಪ್ರಮಾಣ ಶೇ 98.79 ಎಂದು ಆರೋಗ್ಯ ಸಚಿವಾಲಯದ ವೆಬ್‌ಸೈಟ್‌ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT