ನವದೆಹಲಿ: ದೇಶದಲ್ಲಿ ಶುಕ್ರವಾರ ಬೆಳಿಗ್ಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 2,51,209 ಕೋವಿಡ್ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಇಲಾಖೆಯು ವರದಿ ಮಾಡಿದೆ.

ಈ ಮೂಲಕ ದೈನಂದಿನ ಸೋಂಕು ಪ್ರಕರಣ ಹಾಗೂ ದೃಢ ಪ್ರಮಾಣದಲ್ಲಿ ಗಣನೀಯವಾದ ಇಳಿಕೆ ಕಂಡುಬಂದಿದೆ.

ಗುರುವಾರ ಹಾಗೂ ಬುಧವಾರದಂದು ಅನುಕ್ರಮವಾಗಿ 2.86 ಲಕ್ಷ ಹಾಗೂ 2.85 ಲಕ್ಷ ಪ್ರಕರಣಗಳು ವರದಿಯಾಗಿದ್ದವು.

ಇದನ್ನೂ ಓದಿ:ಕೇಂದ್ರದಿಂದ ಕರ್ನಾಟಕ ಸೇರಿ ಎಂಟು ರಾಜ್ಯಗಳ ಕೋವಿಡ್ ಸ್ಥಿತಿಗತಿ ಪರಿಶೀಲನೆ

ಕಳೆದ 24 ತಾಸಿನ ಅವಧಿಯಲ್ಲಿ 627 ಮಂದಿ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.

ಇದೇ ಅವಧಿಯಲ್ಲಿ 3,47,443 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 21,05,611ಕ್ಕೆ ತಲುಪಿದೆ.

ದೈನಂದಿನ ಕೋವಿಡ್ ದೃಢ ಪ್ರಮಾಣವು ಶೇ 15.88ಕ್ಕೆ ಇಳಿಕೆಯಾಗಿದೆ. ಇದು ಗುರುವಾರ ಶೇ 19.59ರಷ್ಟಾಗಿತ್ತು.

ಇದುವರೆಗೆ 164.44 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.