ನವದೆಹಲಿ: ಗುರುವಾರ ಬೆಳಿಗ್ಗೆ 8ಕ್ಕೆ ಕೊನೆಗೊಂಡಂತೆ 24 ಗಂಟೆಗಳಲ್ಲಿ ದೇಶದಲ್ಲಿ 31,923 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 282 ಮಂದಿ ಸಾವಿಗೀಡಾಗಿದ್ದಾರೆ. ಇದೇ ಅವಧಿಯಲ್ಲಿ 31,990 ಚೇತರಿಸಿಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.
ಹಾಗಾಗಿ, ದೇಶದಲ್ಲಿ ಈವರೆಗಿನ ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 3,35,31,498ಕ್ಕೆ ಏರಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 3,01,604ಕ್ಕೆ ಇಳಿದಿದೆ.
ಕೋವಿಡ್‌ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 4,46,050ಕ್ಕೆ ಏರಿದೆ.
ದೇಶದಲ್ಲಿ ಈವರೆಗೆ 83.39 ಕೋಟಿ ಡೋಸ್ ಲಸಿಕೆ ವಿತರಣೆ ಮಾಡಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.