ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update: 35 ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣ, 440 ಮಂದಿ ಸಾವು

Last Updated 18 ಆಗಸ್ಟ್ 2021, 5:01 IST
ಅಕ್ಷರ ಗಾತ್ರ

ನವದೆಹಲಿ: ದೇಶದಾದ್ಯಂತ ಬುಧವಾರ 24 ಗಂಟೆಗಳ ಅವಧಿಯಲ್ಲಿ 35,178 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 440 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 3,22,85,857ಕ್ಕೆ ಏರಿಕೆಯಾಗಿದೆ. ಆ ಪೈಕಿ 4,32,519 ಮಂದಿ ಸಾವಿಗೀಡಾಗಿದ್ದಾರೆ.

ಇದುವರೆಗೆ 3,14,85,923 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 3,67,415 ಸಕ್ರಿಯ ಪ್ರಕರಣಗಳಿವೆ.

ಕೇರಳದಲ್ಲಿ 1,75,695, ಮಹಾರಾಷ್ಟ್ರದಲ್ಲಿ 64,790, ಕರ್ನಾಟಕದಲ್ಲಿ 21,507, ತಮಿಳುನಾಡಿನಲ್ಲಿ 20,225, ಆಂಧ್ರಪ್ರದೇಶ 16,341 ಸಕ್ರಿಯ ಪ್ರಕರಣಗಳಿವೆ.

ದೇಶದಾದ್ಯಂತ ಈವರೆಗೆ 56,06,52,030 ಡೋಸ್ ಲಸಿಕೆ ಹಾಕಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT