ಬುಧವಾರ, ಸೆಪ್ಟೆಂಬರ್ 29, 2021
19 °C

Covid-19 India Update| ದೇಶದಾದ್ಯಂತ ಇಂದು 47,092 ಸೋಂಕು ಪ್ರಕರಣಗಳು ಪತ್ತೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ದೇಶದಾದ್ಯಂತ ಗುರುವಾರ ಹೊಸದಾಗಿ 47,092 ಕೊರೊನಾ ಸೋಂಕಿನ ಪ್ರಕರಣಗಳು ವರದಿಯಾಗಿವೆ. ಈ  ಮೂಲಕ  ಒಟ್ಟು ಸೋಂಕಿನ ಪ್ರಕರಣಗಳ ಸಂಖ್ಯೆ 3,28,57,937ಕ್ಕೆ ಏರಿದೆ.

ದೇಶದಲ್ಲಿ ಒಂದೇ ದಿನ 11,402ರಷ್ಟು ಸಕ್ರಿಯ ಪ್ರಕರಣಗಳು ವರದಿಯಾಗಿದ್ದು, ಈ ಮೂಲಕ ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 3,89,583ಕ್ಕೆ ಏರಿಕೆಯಾಗಿದೆ. ಒಟ್ಟು ಸೋಂಕಿನ ಪ್ರಮಾಣ ಶೇ 1.19 ರಷ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಿದೆ.

ಇದೇ ದಿನ ದೇಶದಲ್ಲಿ ಕೊರೊನಾದಿಂದ 509 ಸಾವುಗಳು ಸಂಭವಿಸಿವೆ. ಇಲ್ಲಿಯವರೆಗೆ  ಕೊರೊನಾ ಸೋಂಕಿನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 4,39,529ಕ್ಕೆ ಏರಿದೆ. ಶೇಕಡಾವಾರು ಸಾವಿನ ಪ್ರಮಾಣ 1.34 ರಷ್ಟಿದೆ. ಕಾಯಿಲೆಯಿಂದ ಗುಣಮುಖರಾದವರ ಸಂಖ್ಯೆ 3,20,28,825 ಕ್ಕೆ ಏರಿಕೆಯಾಗಿದೆ. ಚೇತರಿಕೆ ಪ್ರಮಾಣ ಶೇ 97.48ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

ದೇಶದಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇ 2.62 ರಷ್ಟಿದೆ. ಕಳೆದ 69 ದಿನಗಳಿಂದ ಶೇ 3ಕ್ಕಿಂತ ಕಡಿಮೆ ಪಾಸಿವಿಟಿ ದರ ದಾಖಲಾಗುತ್ತಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು