ನವದೆಹಲಿ: ದೇಶದಲ್ಲಿ ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ಕೋವಿಡ್ 9,923 ಹೊಸ ಪ್ರಕರಣಗಳು ದೃಢಪಟ್ಟಿವೆ. 17 ಜನ ಸೋಂಕಿತರು ಮೃತಪಟ್ಟಿದ್ದಾರೆ.

ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 4,33,19,396ಕ್ಕೆ ಏರಿಕೆಯಾಗಿದೆ.ಕಳೆದ 24 ತಾಸುಗಳಲ್ಲಿ ದೆಹಲಿಯಲ್ಲಿ ಆರು, ಕೇರಳದಲ್ಲಿ ಐವರು, ಮಹಾರಾಷ್ಟ್ರದಲ್ಲಿ ಇಬ್ಬರು, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಪಶ್ಚಿಮ ಬಂಗಾಳ ಮತ್ತು ಉತ್ತರ ಪ್ರದೇಶದಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.

ಒಟ್ಟು ಸಾವಿನ ಸಂಖ್ಯೆ 5,24,890ಕ್ಕೆ ತಲುಪಿದೆ.ದೈನಂದಿನ ಸೋಂಕು ದೃಢ ಪ್ರಮಾಣ ಶೇ 2.55 ಮತ್ತು ವಾರದ ದೃಢ ಪ್ರಮಾಣ 2.67 ಇದೆ. ಸಕ್ರಿಯ ಪ್ರಕರಣಗಳ ಪ್ರಮಾಣ ಶೇ 0.18ರಷ್ಟಿದ್ದು, ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 79,313ಕ್ಕೆ ಏರಿದೆ. ಚೇತರಿಕೆ ಪ್ರಮಾಣ ಶೇ 98.61 ಇದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಆಜಾದ್ಗೆ ಕೋವಿಡ್:ಕಾಂಗ್ರೆಸ್ನ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಅವರಿಗೆ ಕೋವಿಡ್ ಸೋಂಕು ಇರುವುದು ಮಂಗಳವಾರ ದೃಢಪಟ್ಟಿದೆ. ಮನೆಯಲ್ಲಿ ಪ್ರತ್ಯೇಕವಾಗಿರಲು ಅವರಿಗೆ ವೈದ್ಯರು ಸಲಹೆ ನೀಡಿದ್ದಾರೆ. ಈ ವಿಷಯವನ್ನು ಆಜಾದ್ ಟ್ವಿಟ್ನಲ್ಲಿ ಹಂಚಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.