ಶುಕ್ರವಾರ, ಡಿಸೆಂಬರ್ 3, 2021
20 °C

Covid-19 India Update: 14,146 ಹೊಸ ಪ್ರಕರಣ, 144 ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 14,146 ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಪ್ರಕರಣಗಳ ಒಟ್ಟು ಸಂಖ್ಯೆ 3,40,67,719ಕ್ಕೆ ಏರಿದೆ. ಇದೇ ಅವಧಿಯಲ್ಲಿ 144 ಜನರು ಮೃತಪಟ್ಟಿದ್ದು, ಮೃತರ ಒಟ್ಟು ಸಂಖ್ಯೆ 4,52,124ಕ್ಕೆ ಏರಿದೆ.

ಆರೋಗ್ಯ ಸಚಿವಾಲಯವು ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ, ಸದ್ಯ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1,95,846 ಆಗಿದೆ. ಇದು ಒಟ್ಟು ಪ್ರಕರಣಗಳ ಶೇ 0.57ರಷ್ಟಿದೆ. ದೇಶವ್ಯಾಪಿ ಚೇತರಿಕೆಯ ಪ್ರಮಾಣ ಶೇ 98.10ರಷ್ಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ ಕಳೆದ 24 ಗಂಟೆಗಳಲ್ಲಿ 5,786ರಷ್ಟು ಕಡಿಮೆಯಾಗಿದೆ.

ಶನಿವಾರ ಹೊಸದಾಗಿ 11,00,123 ಕೊರೊನಾ ಸೋಂಕು ಪರೀಕ್ಷೆಯನ್ನು ನಡೆಸಲಾಗಿದೆ. ಒಟ್ಟು ಪರೀಕ್ಷೆಗಳ ಸಂಖ್ಯೆ 59,09,35,381ಕ್ಕೆ ಏರಿದೆ. ರಾಷ್ಟ್ರೀಯ ಲಸಿಕೆ ಅಭಿಯಾನ ಕಾರ್ಯಕ್ರಮದಡಿ ಒಟ್ಟಾರೆ 97.65 ಕೋಟಿ ಡೋಸ್‌ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು