ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

India Covid Update: 2.68 ಲಕ್ಷ ಹೊಸ ಪ್ರಕರಣ ದಾಖಲು

Last Updated 15 ಜನವರಿ 2022, 5:57 IST
ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿ ಶನಿವಾರ ಬೆಳಿಗ್ಗೆ ಕೊನೆಗೊಂಡಂತೆ ಕಳೆದ 24 ತಾಸುಗಳಲ್ಲಿ ಕೋವಿಡ್ ದೃಢಪಟ್ಟ 2,68,833 ಹೊಸ ಪ್ರಕರಣಗಳು ಪತ್ತೆಯಾಗಿವೆ.

ಇದೇ ಅವಧಿಯಲ್ಲಿ 402 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆಯು ತಿಳಿಸಿದೆ.

ಭಾರತದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 14,17,820ಕ್ಕೆ ತಲುಪಿದೆ. ಕೋವಿಡ್ ದೃಢ ಪ್ರಮಾಣವು ಶೇ 16.66ಕ್ಕೆ ಏರಿಕೆಯಾಗಿದೆ.

1,22,684 ಮಂದಿ ರೋಗದಿಂದ ಗುಣಮುಖರಾಗಿದ್ದಾರೆ. ಈ ವರೆಗೆ 4,85,752 ಮಂದಿ ಕೋವಿಡ್‌ನಿಂದ ಸಾವಿಗೀಡಾಗಿದ್ದಾರೆ.

6,041 ಓಮೈಕ್ರಾನ್ ಪ್ರಕರಣ:
ಇದುವರೆಗೆ ಕೊರೊನಾ ವೈರಸ್‌ನ ರೂಪಾಂತರ ತಳಿ ಓಮೈಕ್ರಾನ್‌ನ 6,041 ಪ್ರಕರಣಗಳು ವರದಿಯಾಗಿವೆ.

ದೇಶದಲ್ಲಿ ಈ ವರೆಗೆ 156 ಕೋಟಿ ಕೋವಿಡ್ ಲಸಿಕೆ ಡೋಸ್ ನೀಡಲಾಗಿದೆ.

ಭಾರತದಲ್ಲಿ ಶುಕ್ರವಾರ (ಜ.14) 2.6 ಲಕ್ಷ ಕೋವಿಡ್ ಪ್ರಕರಣಗಳು ದೃಢಪಟ್ಟಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT