ಶನಿವಾರ, 3 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update: 31,443 ಹೊಸ ಪ್ರಕರಣ; 2,020 ಸೋಂಕಿತರು ಸಾವು

ಅಕ್ಷರ ಗಾತ್ರ

ನವದೆಹಲಿ:ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ ಹೊಸದಾಗಿ 31,443 ಕೋವಿಡ್‌-19 ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 3.09 ಕೋಟಿಗೆ (3,09,07,282) ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು ವರದಿಯಾಗಿರುವ 2,020 ಮರಣ ಪ್ರಕರಣವೂ ಸೇರಿ ಒಟ್ಟು 4,10,784 ಜನರು ಸೋಂಕಿನಿಂದಾಗಿ ಸಾವಿಗೀಡಾಗಿದ್ದಾರೆ. ಆದಾಗ್ಯೂಮರಣ ದರ ಶೇ.1.33ಕ್ಕೆ ಕುಸಿದಿದೆ.

ಇದುವರೆಗೆ ಮೂರು ಕೋಟಿಗೂ ಹೆಚ್ಚು ಮಂದಿ ಗುಣಮುಖರಾಗಿದ್ದು, ಚೇತರಿಕೆ ಪ್ರಮಾಣ ಶೇ. 97.28ಕ್ಕೆ ಏರಿದೆ.ಇನ್ನೂ4,32,778 ಸಕ್ರಿಯ ಪ್ರಕರಣಗಳಿವೆ.

38.14ಕೋಟಿ ಜನರಿಗೆ ಈವರೆಗೆ ಲಸಿಕೆ ನೀಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರುಈಶಾನ್ಯ ರಾಜ್ಯಗಳಲ್ಲಿ ಕೋವಿಡ್‌ ಪರಿಸ್ಥಿತಿಯಬಗ್ಗೆ ಚರ್ಚಿಸುವ ಸಲುವಾಗಿ ಆ ಭಾಗದ ಎಂಟು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಇಂದು ಸಭೆ ನಡೆಸಲಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT