ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜ.1ರಿಂದ ಆರು ದೇಶಗಳಿಂದ ಬರುವವರಿಗೆ ಕೋವಿಡ್‌ ನೆಗೆಟಿವ್‌ ವರದಿ ಕಡ್ಡಾಯ: ಮಾಂಡವೀಯ

Last Updated 29 ಡಿಸೆಂಬರ್ 2022, 14:30 IST
ಅಕ್ಷರ ಗಾತ್ರ

ನವದೆಹಲಿ: ಚೀನಾ, ಹಾಂಗ್‌ಕಾಂಗ್‌, ಜಪಾನ್‌, ದಕ್ಷಿಣ ಕೊರಿಯಾ, ಸಿಂಗಪುರ ಮತ್ತು ಥಾಯ್ಲೆಂಡ್‌ನಿಂದ ಭಾರತಕ್ಕೆ ಬರುವ ಪ್ರಯಾಣಿಕರು ಜನವರಿ 1ರಿಂದ ಕಡ್ಡಾಯವಾಗಿ ಕೋವಿಡ್‌ ನೆಗೆಟಿವ್‌ ವರದಿ ಸಲ್ಲಿಸಬೇಕು ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್‌ ಮಾಂಡವೀಯ ಅವರು ಗುರುವಾರ ತಿಳಿಸಿದ್ದಾರೆ.

ಈ ದೇಶಗಳಿಂದ ಬರುವ ಪ್ರಯಾಣಿಕರು ಪ್ರಯಾಣ ಹೊರಡುವ ಮೊದಲು ಕಡ್ಡಾಯವಾಗಿ ಆರ್‌ಟಿ–ಪಿಸಿಆರ್‌ನ ನೆಗೆಟಿವ್‌ ವರದಿಯನ್ನು ‘ಏರ್ ಸುವಿಧಾ’ ಪೋರ್ಟಲ್‌ಗೆ ಸಲ್ಲಿಸಬೇಕು. ಪ್ರಯಾಣ ಹೊರಡುವ 72 ಗಂಟೆಗಳೊಳಗೆ ಕೋವಿಡ್‌ ಪರೀಕ್ಷೆ ಮಾಡಿಸಿರಬೇಕು ಎಂದೂ ಹೇಳಿದ್ದಾರೆ.

ವಿವಿಧ ದೇಶಗಳಲ್ಲಿ ಕೋವಿಡ್‌ ಪ್ರಕರಣಗಳು ಏರಿಕೆಯಾಗುತ್ತಿರುವ ಕಾರಣ ಕೇಂದ್ರ ಸರ್ಕಾರವು ಕೋವಿಡ್‌ ಮಾನದಂಡಗಳನ್ನು ಬಿಗಿಗೊಳಿಸಿದ್ದು, ಸನ್ನದ್ಧರಾಗಿರುವಂತೆ ರಾಜ್ಯ ಸರ್ಕಾರಗಳಿಗೆ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ.

ದೇಶದಲ್ಲಿ ಕೋವಿಡ್‌ನ 268 ಹೊಸ ಪ್ರಕರಣಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 3,552ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT