ಸೋಮವಾರ, ಅಕ್ಟೋಬರ್ 26, 2020
28 °C

ಕೋವಿಡ್ ವಿರುದ್ಧ ಭಾರತ- ಮಾಲ್ಡೀವ್ಸ್ ಜಂಟಿ ಹೋರಾಟ: ನರೇಂದ್ರ ಮೋದಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ : ಭಾರತ ಮತ್ತು ಮಾಲ್ಡೀವ್ಸ್ ನಡುವೆ ಪರಸ್ಪರ ಸಹಕಾರ ಇದ್ದು, ಕೋವಿಡ್ ನಿಂದಾಗಿ ಆರೋಗ್ಯ ಕ್ಷೇತ್ರ ಮತ್ತು ಆರ್ಥಿಕತೆ ಮೇಲಿನ ಪರಿಣಾಮಗಳ ವಿರುದ್ಧ ಒಟ್ಟಾಗಿ ಹೋರಾಡಲಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಭಾರತ ನೀಡಿದ್ದ ಆರ್ಥಿಕ ನೆರವಿಗಾಗಿ ಕೃತಜ್ಞತೆಯನ್ನು ಸಲ್ಲಿಸಿ ಮಾಲ್ಡೀವ್ಸ್ ಅಧ್ಯಕ್ಷ ಇಬ್ರಾಹಿಂ ಮೊಹಮ್ಮದ್ ಸಾಲಿಹ್ ಅವರು ಮಾಡಿದ್ದ ಟ್ವೀಟ್ ಗೆ ಪ್ರತಿಕ್ರಿಯಿಸಿ ಪ್ರಧಾನಿ ಈ ಮಾತು ಹೇಳಿದ್ದಾರೆ.

ಮಾಲ್ಡೀವ್ಸ್ ಗೆ ಅಗತ್ಯವಿದ್ದಾಗ ಸ್ನೇಹರಾಷ್ಟ್ರವಾಗಿ ಭಾರತ ನೆರವಾಗುತ್ತಿದೆ. 250 ಮಿಲಿಯನ್ ಡಾಲರ್ ನೆರವಿಗಾಗಿ (ಸುಮಾರು ರೂ.184 ಕೋಟಿ) ಭಾರತ ಸರ್ಕಾರ ಮತ್ತು ಜನತೆಗೆ ಕೃತಜ್ಞತೆಎಂದು ಮಾಲ್ಡೀವ್ಸ್ ಅಧ್ಯಕ್ಷರು ಟ್ವೀಟ್ ಮಾಡಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು