ವಿದೇಶಿ ವಿನಾಶಕಾರಿ ಸಿದ್ಧಾಂತ, ಆಂದೋಲನ ಜೀವಿಗಳಿಂದ ದೇಶ ರಕ್ಷಿಸಬೇಕಿದೆ: ಮೋದಿ

ನವದೆಹಲಿ: ವಿವಾದಿತ ಕೃಷಿ ಕಾನೂನು ವಿರೋಧಿಸಿ ದೆಹಲಿ ಗಡಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ, ರಾಜ್ಯಸಭೆಯಲ್ಲಿ ಮಾತನಾಡಿದ್ದು ‘ವಿದೇಶಿ ವಿನಾಶಕಾರಿ ಸಿದ್ಧಾಂತ’ (ಎಫ್ಡಿಐ) ಆಂದೋಲನ ಜೀವಿಗಳಿಂದ ನಾವು ದೇಶವನ್ನು ರಕ್ಷಿಸಬೇಕಿದೆ ಎಂದು ಹೇಳಿದ್ದಾರೆ.
ರಾಜ್ಯಸಭೆಯಲ್ಲಿ ಮಾತನಾಡಿದ ಅವರು ದೇಶದ ಹೊಸ ತಲೆಮಾರಿನ ಜನರನ್ನು ವಿದೇಶಿ ವಿನಾಶಕಾರಿ ಸಿದ್ಧಾಂತಗಳಿಂದ ರಕ್ಷಿಸಿಬೇಕಿದ್ದು, ಅವರಲ್ಲಿ ಜಾಗೃತಿ ಮೂಡಿಸಬೇಕಿದೆ ಎಂದು ಪ್ರಧಾನಿ ಮೋದಿ ಪ್ರತಿಪಾದಿಸಿದ್ದಾರೆ.
ಪ್ರತಿಭಟನೆಯ ಹೆಸರಿನಲ್ಲಿ ಹೊಸ ತಲೆಮಾರಿನ ಜನರನ್ನು ದಾರಿ ತಪ್ಪಿಸಲಾಗುತ್ತಿದೆ. ಹಾಗೂ ದೇಶದ ಪ್ರಗತಿಗೆ ಅಡ್ಡಿಪಡಿಸಲಾಗುತ್ತಿದೆ ಎಂದು ಮೋದಿ ಹೇಳಿದರು.
ದೇಶದಲ್ಲಿ ಹೊಸ ತಳಿಯ ಪ್ರತಿಭಟನಾಕಾರರು ಮತ್ತು ಚಳವಳಿಗಳು ಹುಟ್ಟಿಕೊಂಡಿವೆ. ಹಾಗೇ 'ಆಂದೋಲನ ಜೀವಿಗಳಿಂದ’ ಎಚ್ಚರದಿಂದಿರಬೇಕು. ಈಗ ದೇಶದಲ್ಲಿ ಹೊಸ ಎಫ್ಡಿಐ (ವಿದೇಶಿ ವಿನಾಶಕಾರಿ ಐಡಿಯಾಲಜಿ) ಹುಟ್ಟಿಕೊಂಡಿದೆ. ಆ ಸಿದ್ಧಾಂತದಿಂದ ದೇಶವನ್ನು ರಕ್ಷಿಸಬೇಕಾಗಿದೆ. ಈ ಬಗ್ಗೆ ನಾವು ಹೆಚ್ಚು ಜಾಗೃತರಾಗಿರಬೇಕು ಎಂದು ಮೋದಿ ರಾಜ್ಯಸಭೆಯಲ್ಲಿ ಹೇಳಿದ್ದಾರೆ.
ಮೋದಿ ಹೇಳಿದ ‘ಆಂದೋಲನ ಜೀವಿಗಳು’ಟ್ವಿಟರ್ನಲ್ಲಿ ವೈರಲ್ ಆಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.