ಶುಕ್ರವಾರ, ಅಕ್ಟೋಬರ್ 29, 2021
20 °C

ಭಾರತಕ್ಕೆ ಬರಲು ವಿದೇಶಿ ಪ್ರವಾಸಿಗರಿಗೆ ಅ.15ರಿಂದ ಅನುಮತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಅಂತರರಾಷ್ಟ್ರೀಯ ಪ್ರವಾಸೋದ್ಯಮವನ್ನು ಪುನರಾರಂಭಿಸುವುದಾಗಿ ಕೇಂದ್ರ ಸರ್ಕಾರ ಗುರುವಾರ ಘೋಷಿಸಿದೆ.  ಬಾಡಿಗೆ ವಿಮಾನಗಳ ಮೂಲಕ ಭಾರತಕ್ಕೆ ಬರುವವರಿಗೆ ಅ.15ರಿಂದ ಪ್ರವಾಸಿ ವೀಸಾ ನೀಡಲಾಗುವುದು ಎಂದು ಪ್ರಕಟಿಸಿದೆ.

‘ಇತರ ವಿಮಾನಗಳ ಮೂಲಕ ಭಾರತಕ್ಕೆ ಬರುವವರಿಗೆ ನವೆಂಬರ್‌ 15ರ ಪ್ರವಾಸಿ ವೀಸಾ ನೀಡಲಾಗುವುದು’ ಎಂದು ಗೃಹ ಸಚಿವಾಲಯ ತಿಳಿಸಿದೆ.

ದೇಶದಲ್ಲಿ ಕಳೆದ ಮಾರ್ಚ್‌ನಲ್ಲಿ ಕೋವಿಡ್‌–19 ಪ್ರಕರಣಗಳು ಹೆಚ್ಚಿದವು. ಈ ಕಾರಣದಿಂದ ವಿದೇಶ ಪ್ರವಾಸಿಗರ ಭೇಟಿಗೆ ಅವಕಾಶ ನಿರಾಕರಿಸಲಾಗಿತ್ತು. ಈಗ ಪ್ರವಾಸೋದ್ಯಮಕ್ಕೆ ಪುನಶ್ಚೇತನ ನೀಡಲು ಸರ್ಕಾರ ಮುಂದಾಗಿದೆ ಎಂದು ಮೂಲಗಳು ಹೇಳಿವೆ.

ಚಳಿಗಾಲ ಆರಂಭವಾದ ನಂತರ ವಿದೇಶಿ ಪ್ರವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾರತಕ್ಕೆ ಭೇಟಿ ನೀಡುತ್ತಾರೆ. ಅದರಲ್ಲೂ ಗೋವಾದ ತೀರಗಳು ವಿದೇಶಿ ಪ್ರವಾಸಿಗಳ ಆಕರ್ಷಣೀಯ ತಾಣವಾಗಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.