ಬುಧವಾರ, ಜೂನ್ 16, 2021
21 °C

ಸಂಸದೀಯ ಸಮಿತಿ ಎದುರು ಹಾಜರಾಗಲು ಫೇಸ್‌ಬುಕ್‌ಗೆ ನೋಟಿಸ್‌

ರಾಯಿಟರ್ಸ್‌ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಫೇಸ್‌ಬುಕ್‌ನಲ್ಲಿ ಪ್ರಕಟವಾಗುತ್ತಿರುವ ರಾಜಕೀಯ ವಿವಾದಾತ್ಮಕ ಸುದ್ದಿಗಳಿಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನ ಮುಖ್ಯಸ್ಥರನ್ನು ಸಂಸದೀಯ ಸಮಿತಿ ಪ್ರಶ್ನಿಸಲಿದೆ ಎಂದು ಸಮಿತಿಯ ಸದಸ್ಯರೊಬ್ಬರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ಈ ಸಂಬಂಧ ಸೆಪ್ಟೆಂಬರ್ 2 ರಂದು ಸಂಸತ್ತಿನ ಮಾಹಿತಿ ತಂತ್ರಜ್ಞಾನ ಸಮಿತಿಯ ಎದುರು ಹಾಜರಾಗುವಂತೆ ಫೇಸ್‌ಬುಕ್‌ ಇಂಡಿಯಾ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದೆ.

ದೇಶದಲ್ಲಿ ಆಡಳಿತಾರೂಢ ರಾಜಕೀಯ ಪಕ್ಷದ ನಾಯಕರ ದ್ವೇಷ ಭಾಷಣಗಳಿಗೆ ಫೇಸ್‌ಬುಕ್‌ನ ನಿಯಮಗಳು ಅನ್ವಯಿಸುವುದಿಲ್ಲ ಎಂಬ ಫೇಸ್‌ಬುಕ್‌ ಇಂಡಿಯಾದ ಮುಖ್ಯಸ್ಥೆ ಅಂಖಿ ದಾಸ್ ಅವರ ಹೇಳಿಕೆ ಹಿನ್ನೆಯಲ್ಲಿ ಫೇಸ್‌ಬುಕ್ ಸಂಸ್ಥೆಗೆ ನೋಟಿಸ್ ಜಾರಿ ಮಾಡಲಾಗಿದೆ.

 

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು