ನವದೆಹಲಿ: ‘ಭಾರತವು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಿಂದಾಗಿ ಜಾಗತಿಕ ಮಟ್ಟದಲ್ಲಿ ಪ್ರಮುಖ ಪಾತ್ರವಹಿಸಿದೆ’ ಎಂದು ಬಿಜೆಪಿ ಹೇಳಿದೆ.

ಅಮೆರಿಕ ಪ್ರವಾಸ ಕೈಗೊಂಡಿರುವ ಪ್ರಧಾನಿ ಮೋದಿ ಅವರು, ವಿಶ್ವದ ಹಲವು ನಾಯಕರು ಮತ್ತು ವಿವಿಧ ಕಂಪನಿಗಳ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳೊಂದಿಗೆ ಹಲವು ಸಭೆಗಳನ್ನು ನಡೆಸಿರುವುದನ್ನು ಗಮನಿಸಿದರೆ ಭಾರತವು ಮೋದಿ ನಾಯಕತ್ವದಲ್ಲಿ ಅಂತರರಾಷ್ಟ್ರೀಯ ರಾಜತಾಂತ್ರಿಕತೆ ದೃಷ್ಟಿಯಿಂದ ಪ್ರಮುಖ ಪಾತ್ರವಹಿಸುತ್ತಿದೆ ಎಂದು ಬಿಜೆಪಿ ಹೇಳಿದೆ.

‘ಕ್ವಾಡ್ ಸಭೆಯಲ್ಲಿ ರಾಜತಾಂತ್ರಿಕ ವಿಷಯಗಳ ಜತೆಗೆ ಕೋವಿಡ್ ಲಸಿಕೆ ತಯಾರಿಕೆ ಮತ್ತು ವಿತರಣೆ ಬಗ್ಗೆ ಪ್ರಧಾನಿ ಮೋದಿ ಅವರು ಚರ್ಚೆ ನಡೆಸಿದ್ದಾರೆ’ ಎಂದು ಬಿಜೆಪಿ ವಕ್ತಾರ ಸುಧಾಂಶು ತ್ರಿವೇದಿ ತಿಳಿಸಿದ್ದಾರೆ.

‘ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ಬಳಿಕ ಕಳೆದ ಏಳು ವರ್ಷಗಳಲ್ಲಿ ಭಾರತ – ಅಮೆರಿಕ ನಡುವಿನ ಸಂಬಂಧ ಮತ್ತಷ್ಟು ಗಟ್ಟಿಯಾಗಿದೆ’ ಎಂದು ತ್ರಿವೇದಿ ಹೇಳಿದ್ದಾರೆ.

ಇದನ್ನೂ ಓದಿ... ಬಾಲಾಕೋಟ್, ಗಾಲ್ವನ್ ಮೂಲಕ ಅತಿಕ್ರಮಣಕಾರರಿಗೆ ಸ್ಪಷ್ಟ ಸಂದೇಶ: ರಾಜನಾಥ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.