ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

covid-19 India update: ದೇಶದಲ್ಲಿ 15,144 ಹೊಸ ಕೋವಿಡ್‌ ಪ್ರಕರಣಗಳು ಪತ್ತೆ

Last Updated 17 ಜನವರಿ 2021, 5:44 IST
ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 15,144 ಹೊಸ ಪ್ರಕರಣಗಳು ವರದಿಯಾಗಿದ್ದು, ಈ ಮೂಲಕಭಾನುವಾರ ಒಟ್ಟು ಪ್ರಕರಣಗಳ ಸಂಖ್ಯೆ 1,05,57,985ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ತಿಳಿಸಿದೆ.

ದೇಶದಲ್ಲಿ ಹೊಸದಾಗಿ 181 ಜನರು ಮೃತಪಟ್ಟಿದ್ದಾರೆ. ಈವರೆಗೆ ಸೋಂಕಿನಿಂದ 1,52,274 ಮಂದಿ ಸಾವಿಗೀಡಾಗಿದ್ದಾರೆ. ಆದರೆ, ಕೊರೊನಾ ಸೋಂಕಿನಿಂದ ಗುಣಮಖರಾದವರ ಸಂಖ್ಯೆಯಲ್ಲೂ ಏರಿಕೆಯಾಗಿದೆ.

ಇದುವರೆಗೆ 1,01,96,885 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಹಾಗಾಗಿ ದೇಶದ ಚೇತರಿಕೆಯ ಒಟ್ಟು ಪ್ರಮಾಣವು ಶೇಕಡ 95.92ಕ್ಕೆ ಹೆಚ್ಚಿದೆ. ಇನ್ನೊಂದೆಡೆ ಸಾವಿನ ಪ್ರಮಾಣವು ಶೇಕಡ 1.44 ರಷ್ಟಿದೆ ಎಂದು ಸಚಿವಾಲಯವು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT